ಸುದ್ದಿಮೂಲ ವಾರ್ತೆ
ಆನೇಕಲ್,ಜೂ.1: ಮನೆಯ ಕಾಂಪೌಂಡ್ನಲ್ಲಿ ಕೈ-ಕಾಲು ಹಾಗೂ ರುಂಡವಿಲ್ಲದ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಬನ್ನೇರುಘಟ್ಟದ ಜನತಾ ಕಾಲೋನಿಯ ನಿವಾಸಿ ಗೀತಮ್ಮಎಂದು ಗುರುತಿಸಲಾಗಿದೆ.
ಗೀತಮ್ಮನವರ ದೇಹ ತುಂಡಾಗಿದ್ದು, ಸಾಕಷ್ಟು ಅನುಮಾನಗಳಿಗೆ ವ್ಯಕ್ತವಾಗಿದೆ. ಬನ್ನೇರುಘಟ್ಟ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸ್ ಮಾಹಿತಿ ಪ್ರಕಾರ, ಗೀತಮ್ಮ ಇಬ್ಬರ ಮಕ್ಕಳಿಗೆ ಮದುವೆ ಮಾಡಿ ಒಂಬ್ಬಂಟಿ ಜೀವನ ನಡೆಸುತ್ತಿದ್ದರು. ಸ್ಥಳೀಯ ಖಾಸಗಿ ಕಂಪನಿಯಲ್ಲಿ ಅಯಾ ಕೆಲಸ ಮಾಡಿಕೊಂಡು ಜೀವನ ಸಾಗಿಸುತಿದ್ದರು ಎನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಮಾಹಿತಿ ನೀಡಿದ್ದಾರೆ.