ಚಿಕ್ಕಬಳ್ಳಾಪುರ, ಜೂನ್ 21:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೋಗ ಸಂಸ್ಥೆಗಳ ಸಹಯೋಗದಲ್ಲಿ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಇಂದು (ಜೂನ್ 21 ರಂದು ಬೆಳಿಗ್ಗೆ 7:00 ಗಂಟೆಗೆ) ಮುಂಜಾನೆ ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಸಿ. ಸುಧಾಕರ್ ಅವರು ಯೋಗ ಅಭ್ಯಾಸ ಮಾಡುವ ಮೂಲಕ ಜಿಲ್ಲಾ ಮಟ್ಟದ ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖ್ಯ ಯೋಗ ತರಬೇತುದಾರರಾದ ನಾಗರಾಜ್, ಲೋಕ್ ನಾಥ್, ಎಂ. ರವಿ, ಗೋವಿಂದ್,ಮಹೇಶ್, ರಾಮಚಂದ್ರ ರೆಡ್ಡಿ,ವೀಣಾ ಲೋಕ್ ನಾಥ್, ಸುಧಾ ನಾಗರಾಜ್ ಅವರು ಆಸನಗಳನ್ನು ಹೇಳಿಕೊಟ್ಟರು.
ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಅಪರ ಜಿಲ್ಲಾಧಿಕಾರಿ ಡಾ|| ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್,ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ. ಹರೀಶ್,ಜಿಲ್ಲಾ ಆಯುಷ್ ಅಧಿಕಾರಿ ತಬಿಬಾಬಾನು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸಿದ್ದರು.