ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.25:
ರಾಜ್ಯ ಸರ್ಕಾರ ಸೆ.22ರಿಂದ ಆರಂಭಿಸಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿರುವ ಕಾರಣ ಮತ್ತು ಹೈಕೋರ್ಟ್, ಸಮೀಕ್ಷಾ ಮಾಹಿತಿಯ ಗೌಪ್ಯತೆಯನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದ್ದರಿಂದ ಈ ಮೂಲಕ ರಾಜ್ಯದಲ್ಲಿ ನಡೆಯುತ್ತಿಿರುವ ಸಮೀಕ್ಷೆಗೆ ಬಲ ಸಿಕ್ಕಂತಾಗಿದೆ.
ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಗಾಗಿ ಸರ್ಕಾರ ಆಗಸ್ಟ್ 13ರಂದು ಹೊರಡಿಸಿರುವ ಆದೇಶ ಪ್ರಶ್ನಿಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಾಹ್ಮಣ ಮಹಾಸಭಾ, ಹಿರಿಯ ವಕೀಲ ಕೆ.ಎನ್. ಸುಬ್ಬಾಾರೆಡ್ಡಿಿ ಮತ್ತಿಿತರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿಿ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಾಯಮೂರ್ತಿ ಸಿ.ಎಂ. ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿತು.
ಇದೇ ವೇಳೆ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಹಿಂದುಳಿದ ಆಯೋಗ ಹೊರತುಪಡಿಸಿ ಬೇರೆ ಯಾರೊಂದಿಗೂ ಹಂಚಿಕೊಳ್ಳಬಾರದು. ಅಲ್ಲದೆ ಸಮೀಕ್ಷೆಯಲ್ಲಿ ಪಾಲ್ಗೊೊಂಡು ಮಾಹಿತಿ ನೀಡುವಂತೆ ನಾಗರಿಕರನ್ನು ಒತ್ತಾಾಯಪಡಿಸಬಾರದು. ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಹೈಕೋರ್ಟ್ ಸರ್ಕಾರಕ್ಕೆೆ ವಿಧಿಸಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕಳೆದ ಮೂರು ದಿನಗಳಿಂದ ನಡೆಯುತ್ತಿಿದ್ದು, ಇಂದೂ ಸಹ ಅರ್ಜಿದಾರರು, ಸರ್ಕಾರ ಮತ್ತು ಆಯೋಗದ ಪರ ವಕೀಲರುಗಳಿಂದ ತೀವ್ರ ವಾದ ವಿವಾದ ನಡೆಯಿತು.
ಎಲ್ಲರ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಸಮೀಕ್ಷೆಯ ಪ್ರಕ್ರಿಿಯೆಯನ್ನು ತಡೆಯುವುದು ಸೂಕ್ತ ಎನಿಸುವುದಿಲ್ಲ. ಆದರೆ, ಆಯೋಗವು ಸಂಗ್ರಹಿಸುವ ದತ್ತಾಾಂಶವನ್ನು ಯಾರಿಗೂ ಬಹಿರಂಗಪಡಿಸುವಂತಿಲ್ಲ. ಅದನ್ನು ಸಂರಕ್ಷಿಸಿ, ಗೌಪ್ಯವಾಗಿ ಜತನದಿಂದ ಆಯೋಗ ಕಾಪಾಡಬೇಕು. ಸಮೀಕ್ಷೆಯಲ್ಲಿ ಜನರು ಸ್ವಯಂಪ್ರೇೇರಿತವಾಗಿ ಭಾಗವಹಿಸಬಹುದು. ಅಲ್ಲಿ ಯಾವುದೇ ಮಾಹಿತಿಯನ್ನು ನೀಡುವುದು ಕಡ್ಡಾಾಯವಲ್ಲ ಎಂಬುದರ ಸಂಬಂಧ ಆಯೋಗವು ಹೊರಡಿಸುವ ಅಧಿಸೂಚನೆಯನ್ನು ನ್ಯಾಾಯಾಲಯಕ್ಕೆೆ ಸಲ್ಲಿಸಬೇಕು. ದತ್ತಾಾಂಶ ಸಂಗ್ರಹಿಸಲು ಮನೆಮನೆಗೆ ತೆರಳುವ ಮೇಲ್ವಿಿಚಾರಕರು ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇೇರಿತ ಎಂಬುದನ್ನು ಜನರಿಗೆ ತಿಳಿಸಬೇಕು. ಒಂದೊಮ್ಮೆೆ ಸಮೀಕ್ಷೆಯಲ್ಲಿ ಜನರು ಭಾಗವಹಿಸಲು ನಿರಾಕರಿಸಿದರೆ, ಮೇಲ್ವಿಿಚಾರಕರು ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಜನರನ್ನು ಪುಸಲಾಯಿಸುವಂತಿಲ್ಲ ಎಂದು ನಿರ್ದೇಶನ ನೀಡಿತು.
ಅಲ್ಲದೇ, ಸಮೀಕ್ಷೆಯಲ್ಲಿ ಸಂಗ್ರಹಿಸಿದ ದತ್ತಾಾಂಶವು ಆಯೋಗವಲ್ಲದೇ ಬೇರಾರಿಗೂ ಲಭ್ಯವಾಗಬಾರದು. ದತ್ತಾಾಂಶ ಸಂಗ್ರಹ ಮತ್ತು ಅದರ ಜತನಕ್ಕೆೆ ಸಂಬಂಧಿಸಿದಂತೆ ತಾನು ಕೈಗೊಂಡಿರುವ ಕ್ರಮದ ಬಗ್ಗೆೆ ಆಯೋಗವು ಒಂದು ವಾರದಲ್ಲಿ ಅಫಿಡವಿಟ್ ಸಲ್ಲಿಸಬೇಕು ಎಂದು ಆದೇಶಿಸಿದೆ.
ಜೊತೆಗೆ ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದಿರುವ ನ್ಯಾಾಯಾಲಯವು ಪ್ರಕರಣದ ವಿಚಾರಣೆಯನ್ನು ಡಿ.2ಕ್ಕೆೆ ಮುಂದೂಡಿತು.
ರಾಜ್ಯ ಸರ್ಕಾರದ ಪರ ಅಡ್ವೊೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿಿ ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಭುಲಿಂಗ ನಾವದಗಿ, ಅಶೋಕ್ ಹಾರನಹಳ್ಳಿಿ, ವಿವೇಕ್ ಸುಬ್ಬಾಾರೆಡ್ಡಿಿ ಮತ್ತು ಎಸ್. ಶ್ರೀರಂಗ ಅವರು ವಾದಿಸಿದರು.