ಸುದ್ದಿಮೂಲ ವಾರ್ತೆ
ಮೈಸೂರು, ನ.21: ರೌಡಿ ಶೀಟರ್ ಗೆ ನೀಡಿದ್ದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ಅವರು ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ನ.1 ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.ರಾಜ್ಯೋತ್ಸವ ಪ್ರಶಸ್ತಿಯನ್ನು ಹಿಂಪಡೆಯಲಾಗಿದೆಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರು ಮಾಹಿತಿ ನೀಡಿದ್ದಾರೆ. ಪೊಲೀಸರಿಂದ ಆತನ ಹಿನ್ನೆಲೆ, ಮಾಹಿತಿ ಪಡೆಯಲು ತಡವಾಯಿತು. ಈಗ ಆತ ರೌಡಿ ಶೀಟರ್ ಎಂಬುದು ತಿಳಿದು ಬಂದಿದೆ ಎಂದು ಹೇಳಿದ್ದಾರೆ.