ಸುದ್ದಿಮೂಲವಾರ್ತೆ
ಕೊಪ್ಪಳ,ಜೂ.12: ಬಾಲ ಕಾರ್ಮಿಕ ಪದ್ಧತಿಯನ್ನು ತೊಲಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬನ್ನಿಕಟ್ಟಿ ಹನುಮಂತಪ್ಪ ಆರ್ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಇವರುಗಳ ಸಂಯುಕ್ತ ಆಶ್ರಯದಲ್ಲಿ
ನಗರದ ಸಾಹಿತ್ಯ ಭವನದಲ್ಲಿ ಜೂನ್ 12ರಂದು ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋದಿ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳು ಶಿಕ್ಷಣದಿಂದ ಹೇಗೆ ವಂಚಿತರಾಗುತ್ತಾರೆ ಎಂಬುದನ್ನು ಪ್ರತಿಯೊಬ್ಬ ಶಿಕ್ಷಕರು ಅರಿಯಬೇಕು. ಕಲಿಕೆ ಮಾಡುವುದರ ಜತೆಗೆ ಮಕ್ಕಳ ಪಾಲಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವ ಮಹತ್ವದ ಈ ಸಮಾಜ ಸೇವಾ ಕೈಂಕರ್ಯವನ್ನು ಶಿಕ್ಷಕ ಸಮೂಹ ಆಸ್ಥೆಯಿಂದ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಬರೀ ಶಿಕ್ಷೆ ಕೊಡುವುದರಿಂದ ಈ ಪದ್ಧತಿಯನ್ನು ತೊಲಗಿಸಲು ಆಗುವುದಿಲ್ಲ. ಜನರಲ್ಲಿ ಈ ದುಷ್ಟ ಪದ್ಧತಿಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದಾಗ ಮಾತ್ರ ಬದಲಾವಣೆ ತರಲು ಸಾಧ್ಯವಿದೆ ಎಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರು ಮಾತನಾಡಿ, ಬಾಲ ಕಾರ್ಮಿಕರು ಕಂಡೆ ಕಡೆಗಳಲ್ಲಿ ಇಲಾಖೆಯಿಂದ ದಾಳಿ ನಡೆಸಿ ಕಾರ್ಯಪ್ರವೃತ್ತರಾಗಿದ್ದೇವೆ. ನಮ್ಮ ಕಾರ್ಯಾಚರಣೆಗೆ ಪೊಲೀಸ್ ಇಲಾಖೆಯಿಂದ ಸಾಕಷ್ಟು ಸಹಕಾರ ಸಿಕ್ಕಿದೆ ಎಂದರು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಅಧ್ಯಕ್ಷತೆ ವಹಿಸಿದ್ದರು.
ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಹಾಗೂ ತ್ವರಿತಗತಿ ವಿಶೇಷ ಪೋಕ್ಸೋ ನ್ಯಾಯಾಲಯ-1ರ ನ್ಯಾಯಾಧೀಶರಾದ ಕುಮಾರ ಡಿ.ಕೆ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್, ಸಿಜೆಎಂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಲ್.ಜೆ ಭವಾನಿ, ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹರೀಶ್ ಕುಮಾರ ಎಮ್., ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಆದಿತ್ಯಾ ಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಕರಾದ ಮುತ್ತು ರಡ್ಡೇರ್, ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಸುಧಾ ಗರಗ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೋಟಗಾರ, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಸಂಯೋಜಕರಾದ ಹರೀಶ ಜೋಗಿ, ಜಿಲ್ಲಾ ವಕೀಲರ ಸಂಘ ಅಧ್ಯಕ್ಷರಾದ ಎ.ವಿ.ಕಣವಿ, ಸರಕಾರಿ ವಕೀಲರಾದ ರಾಜಶೇಖರ ವಿ.ಗಣವಾರಿ, ಕೊಪ್ಪಳ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ನಿಲೋಫರ್ ರಾಂಪುರಿ,
ಕೊಪ್ಪಳ ವೃತ್ತ ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ತಳವಾರ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ ಉಪಸ್ಥಿತರಿದ್ದರು.