ಸುದ್ದಿಮೂಲವಾರ್ತೆ
ಕೊಪ್ಪಳ,ಅ.17;ಶೀಘ್ರದಲ್ಲಿ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಜರುಗಲಿದ್ದು ಪದವಿ ಹೊಂದಿದವರು ಅಗತ್ಯ ದಾಖಲೆಗಳೊಂದಿಗೆ ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಹೆಸರು ನೊಂದಾಯಿಸಿರಿ ಎಂದು ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಹೇಳಿದರು.
ಇಂದು ಕೊಪ್ಪಳ ತಹಶೀಲ ಕಾರ್ಯಾಲಯದಲ್ಲಿ ಮತದಾರರ ವಿಶೇಷ ನೊಂದಣಿ ಅಭಿಯಾನದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಾಥಾವು ತಹಶೀಲ ಕಾರ್ಯಾಲಯದಿಂದ ಅಶೋಕ ಸರ್ಕಲ ವೃತ್ತ, ದಿವಟರ್ ಸರ್ಕಲ್ ಮಾರ್ಗವಾಗಿ ಕೊಪ್ಪಳ ತಾಲೂಕ ಪಂಚಾಯತಿಯವರೆಗೂ ನಡೆಯಿತು.
ಈ ಸಂದರ್ಭದಲ್ಲಿ ಪದವೀಧರ ಮತದಾರರ ವಿಶೇಷ ನೊಂದಣಿ ನೋಡಲ್ ಅಧಿಕಾರಿ ಚಿದಾನಂದ, ತಹಶೀಲ್ದಾರ ವಿಠ್ಠಲ್ ಚೌಗಲೆ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ್ ಜಿ.ಎಚ್, ಕೊಪ್ಪಳ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಪದವಿ ಹೊಂದಿದ ನೌಕರರು ಇದೇ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಹೆಚ್, ತಾಲೂಕ ಯೋಜನಾಧಿಕಾರಿ ರಾಜೇಸಾಬ್ ನದಾಫ್, ಉಪತಹಶೀಲದಾರ ರೇಖಾ ದೀಕ್ಷಿತ್, ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.