ಸುದ್ದಿಮೂಲ ವಾರ್ತೆ ಕಲಬುರಗಿ, ಜ.13:
ಕಳೆದ ಆಗಸ್ಟ್, ಸೆಪ್ಟೆೆಂಬರ್ ಮಾಹೆಯಲ್ಲಿ ಭೀಕರ ಮಳೆಯಿಂದ ಜಿಲ್ಲೆಯಲ್ಲಿ ಹಾಳಾದ ಬೆಳೆಗಳ ಹಾನಿಗಳ ಅಧ್ಯಯನಕ್ಕೆೆ ಆಗಮಿಸಿರುವ ಕೇಂದ್ರ ತಂಡವು ಮಂಗಳವಾರ ಜಿಲ್ಲೆಯ ಕಮಲಾಪುರ ತಾಲೂಕಿನ ಕಿಣ್ಣಿಿ ಸಡಕ್, ಡೊಂಗರಗಾಂವ, ಭೀಮನಾಳ, ಕಮಲಾಪೂರ ಗ್ರಾಾಮಗಳಿಗೆ ಭೇಟಿ ನೀಡಿ ನೆರೆಯಿಂದ ಹಾನಿಯಾದ ಬೆಳೆ, ರಸ್ತೆೆ, ಸೇತುವೆ ಹಾನಿ ವೀಕ್ಷಣೆ ಮಾಡಿತು.
ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಾಣ ಸಚಿವಾಲಯದ ಹೈದ್ರಾಾಬಾದಿನ ಎಣ್ಣೆೆ ಬೀಜ ಅಭಿವೃದ್ಧಿಿ ವಿಭಾಗದ ನಿರ್ದೇಶಕ ಡಾ.ಪೊನ್ನುಸ್ವಾಾಮಿ, ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ ರಾಜ್ ಸಚಿವಾಲಯದ ಅಧೀನ ಕಾರ್ಯದರ್ಶಿ ಜಯಶ್ರೀ ಕಕ್ಕರ್ ಅವರು ಬೆಳೆ ಹಾನಿ, ಮೂಲಸೌಕರ್ಯ ಹಾನಿ ವೀಕ್ಷಿಸಿ ರೈತರ ಅಳಲು ಆಲಿಸಿದರು.
ಡೊಂಗರಗಾಂವ ಗ್ರಾಾಮದ ಸರ್ವೇ ನಂ. 20/3ರಲ್ಲಿ ಸುಮಾರು 4.32 ಎಕರೆ ಪ್ರದೇಶದಲ್ಲಿ ತೊಗರಿ ಬೆಳೆದು ಬೆಳೆ ಹಾನಿಗೊಳಗಾಗಿರುವ ರೈತ ಅಭಿಷೇಕ್ ಅವರ ಹೊಲಕ್ಕೆೆ ಭೇಟಿ ನೀಡಿ ಹಾಳಾದ ತೊಗರಿ ಬೆಳೆ ವೀಕ್ಷಿಸಿದರು. ಪ್ರತಿ ಎಕರೆ 30 ಸಾವಿರ ಖರ್ಚು ಮಾಡಿ ತೊಗರಿ ಬೆಳೆದಿದ್ದು, ವಿಪರೀತ ಮಳೆಯಿಂದ ಎಲ್ಲವು ಹಾಳಾಗಿದೆ. ಬಿತ್ತಿಿದ 5-6 ಕೆ.ಜಿ. ಬಾರದ ಸ್ಥಿಿತಿಯಲ್ಲಿದೆ ಎಂದು ತಂಡದ ಮುಂದೆ ರೈತ ಅಭಿಷೇಕ ತನ್ನ ಅಳಲು ತೋಡಿಕೊಂಡ.
ಜಿಲ್ಲಾಧಿಕಾರಿ ಬಿ.ೌಜಿಯಾ ತರನ್ನುಮ್ ಹಾಗೂ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ ನಷ್ಟದ ಹಾಗೂ ಪರಿಹಾರ ತಂಡಕ್ಕೆೆ ಮಾಹಿತಿ ನೀಡಿದರು.
ಕಮಲಾಪೂರದಲ್ಲಿ ಬೆಳೆ ಹಾನಿ ವೀಕ್ಷಣೆ : ಕಮಲಾಪೂರ ಗ್ರಾಾಮದ ಸರ್ವೆ ನಂ. 323 ರಲ್ಲಿ ಮಹಾದೇವಪ್ಪ ಬಸವಣಪ್ಪ ಸವರಿಗೆ ಸೇರಿದ 6.19 ಎಕರೆಯಲ್ಲಿ ಬೆಳೆದ ತೊಗರಿ ಬೆಳೆ ಹಾನಿ ಸಹ ತಂಡ ವೀಕ್ಷಿಸಿತು. ರೈತ ಪ್ರಶಾಂತ ಮಾತನಾಡಿ ಮೂರಕ್ಕಿಿಂತ ಹೆಚ್ಚಿಿನ ಎಕರೆ ಮಳೆಗೆ ಬೆಳೆ ಹಾಳಾಗಿದೆ. ಪ್ರತಿ ಎಕರೆಗೆ 25-30 ಸಾವಿರ ರೂ. ಖರ್ಚು ಮಾಡಿವೆ ಮಳೆ ಎಲ್ಲವನ್ನು ಕೊಚ್ಚಿಿಕೊಂಡು ಹೋಗಿದೆ. ತದನಂತರ ಕುಸಬಿ ಬೆಳೆದಿದ್ದು, ವ್ಯಾಾಪಕ ಮಳೆಯಿಂದ ಇದರ ಇಳುವರಿ ಬರೋದರ ಕುರಿತು ಅನುಮಾನ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ತಂಡವು ಕಿಣ್ಣಿಿಸಡಕ್-ಡೋರ ಜಂಬಗಾ ನಡುವಿನ ಸೇತುವೆ, ಭೀಮನಾಳ ಗ್ರಾಾಮದಲ್ಲಿನ ರಸ್ತೆೆ ಹಾನಿ ವೀಕ್ಷಣೆ ಮಾಡಿತು.
ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ, ತಹಶೀಲ್ದಾಾರ ಮೊಹಮ್ಮದ್ ಮೋಹಸೀನ್, ಕೃಷಿ ಉಪನಿರ್ದೇಶಕಿ ಅನುಸೂಯಾ ಹೂಗಾರ, ಸಹಾಯಕ ಕೃಷಿ ನಿರ್ದೇಶಕ ಡಾ.ಅರುಣಕುಮಾರ ಮೂಲಿಮನಿ ಇದ್ದರು.
ರೈತರು ಅಳಲು ಆಲಿಸಿದ ತಂಡ : ಕೇಂದ್ರ ನೆರೆ ಹಾನಿ ತಂಡದಿಂದ ಬೆಳೆ ಹಾನಿ ವೀಕ್ಷಣೆ

