ಸುದ್ದಿಮೂಲ ವಾರ್ತೆ ಬೆಂಗಳೂರು, ನ.06:
ನ್ಯಾಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆೆಗಳಿಗೆ ದೇಣಿಗೆ ನೀಡಿದ್ದಕ್ಕೆೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿಿದೆ ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆೆಲ್ಲಾ ಆದರೂ ಇ.ಡಿ. ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದರು.
ಡಿ.19 ರ ಒಳಗೆ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ಗೆ ಇಡಿ ಸಮನ್ಸ್ ನೀಡಿದೆ. ಇದಕ್ಕೆೆ ಸಂಬಂಧಿಸಿದಂತೆ ಈಗಾಗಲೇ ನಾವು ಹಿಂದೆಯೇ ಉತ್ತರ ಕೊಟ್ಟಿಿದ್ದೇವೆ. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.
ದೆಹಲಿ ಪೊಲೀಸರು ಡಿ.19ನೇ ತಾರೀಕಿನ ಒಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ನಾವು ತೆರಿಗೆ ಪಾವತಿ ಮಾಡುತ್ತಿಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡಲು ಪಿಎಂಎಲ್ ಎ ಪ್ರಕರಣ ಕೂಡ ದಾಖಲಿಸಿದ್ದರು. ಆನಂತರ ಏನಾಯಿತು? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಜತೆಗೆ ಗೊಂದಲ ಮೂಡಿಸುವುದು ಇದರ ಉದ್ದೇಶ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ನ್ಯಾಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆೆಗಳಿಗೆ ದೇಣಿಗೆ ನೀಡಿದ್ದಕ್ಕೆೆ ಇಡಿ ನೋಟಿಸ್ ನೀಡಲಾಗಿದೆ. ನ್ಯಾಾಷನಲ್ ಹೆರಾಲ್ಡ್, ಯಂಗ್ ಇಂಡಿಯಾ ಇವು ನಮ್ಮ ಕಾಂಗ್ರೆೆಸ್ ಪಕ್ಷದ ಸಂಸ್ಥೆೆಗಳು. ನಾವು ಕಾಂಗ್ರೆೆಸ್ಸಿಿಗರಾದ ಕಾರಣಕ್ಕೆೆ ಈ ಸಂಸ್ಥೆೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕ ಜನರು ಸಹಾಯ ಮಾಡಿದ್ದಾರೆ ಎಂದರು.
ಶುಕ್ರವಾರ ನನಗೆ ಹಾಗೂ ಸುರೇಶ್ ಅವರಿಗೆ ನೋಟಿಸ್ ಬಂದಿದೆ. ಆತ ಸಂಸದನಾದ ಸಮಯದಲ್ಲಿ ಒಂದಷ್ಟು ಹಣ ದೇಣಿಗೆ ನೀಡಿದ್ದ. ನೋಟಿಸ್ ಅನ್ನು ವಿವರವಾಗಿ ತಿಳಿದುಕೊಂಡು ಕಾನೂನಾತ್ಮಕವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು.

