ಸುದ್ದಿಮೂಲ ವಾರ್ತೆ
ಕುಷ್ಟಗಿ,ಜೂ.13:ಕಂಟೈನರ್’ ಹಿಂಭಾಗಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಕುಷ್ಟಗಿ ಸಮೀಪದ ರಾಷ್ಟ್ರೀಯ ಚತುಷ್ಪಥ ಹೆದ್ದಾರಿಯ ವಣಗೇರೆ ಬಳಿ ಮಂಗಳವಾರ ಬೆಳಗಿನಜಾವ ಸಂಭವಿಸಿದೆ.
ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದವರಾದ ಕಾರು ಚಾಲಕ ಪ್ರವೀಣಕುಮಾರ ಚವ್ಹಾಣ(27), ಸುರೇಶ ಹಂಡೇವಜೀರ(43), ಗೌರಮ್ಮ ಗಂಡ ಹನುಮಗೌಡ ಹಂಡೇವಜೀರ(60) ಮೃತಪಟ್ಟವರು.
ಅತಿವೇಗವಾಗಿ ಕಾರು ಚಲಾಯಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಭಿಕರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾನೆ ಎಂದು ಸ್ಥಳೀಯ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಇದೇ ಹೆದ್ದಾರಿಯಲ್ಲಿ ಕೆಲದಿನಗಳ ಹಿಂದೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿದ್ದರು.