ಸುದ್ದಿಮೂಲ ವಾರ್ತೆ ರಾಯಚೂರು, ಜ.25:
ಇಲ್ಲಿನ ಜಿಲ್ಲಾಡಳಿತದಿಂದ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ.26ರ ಬೆಳಿಗ್ಗೆೆ 9 ಗಂಟೆಗೆ ಗಣರಾಜ್ಯೋೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಿಕೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಾಭಿವೃದ್ಧಿಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ರಾಷ್ಟ ಧ್ವಜಾರೋಹಣ ನೆರವೇರಿಸುವರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿಿತಿ ವಹಿಸುವರು. ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

