ಸುದ್ದಿಮೂಲ ವಾರ್ತೆ ರಾಯಚೂರು, ಡಿ.16:
ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಡಿಸೆಂಬರ್ 29 ರಂದು ವಿಶ್ವಮಾನವ ದಿನಾಚರಣೆ ಹಾಗೂ ಜನವರಿ 01ರಂದು ವಿಶ್ವಕರ್ಮ ಅಮರಶಿಲ್ಪಿಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ ನಡೆಯಲಿವೆ.
ಈ ದಿನಾಚರಣೆ ಅಂಗವಾಗಿ ಡಿಸೆಂಬರ್ 17ರ ಮಧ್ಯಾಾಹ್ನ 3.30ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಿಕೊಳ್ಳಲಾಗಿದ್ದು, ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ.
ಅಂದು ನಡೆಯುವ ಪೂರ್ವಭಾವಿ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಸಮಾಜದ ಮುಖಂಡರುಗಳು ಭಾಗವಹಿಸಿ ಸಭೆ ಯಶಸ್ವಿಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

