ಸುದ್ದಿಮೂಲ ವಾರ್ತೆ ರಾಯಚೂರು, ಸೆ.30:
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಾಭಿವೃದ್ಧಿಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಅಕ್ಟೋೋಬರ್ 1ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋೋಬರ್ 1ರ ಬೆಳಿಗ್ಗೆೆ 6.30 ಗಂಟೆಗೆ ಕಲಬುರಗಿಯಿಂದ ನಿರ್ಗಮಿಸಿ ರಸ್ತೆೆ ಮಾರ್ಗವಾಗಿ ಹೊರಟು ಬೆಳಿಗ್ಗೆೆ 9.30ಕ್ಕೆೆ ಲಿಂಗಸೂಗೂರು ನಗರಕ್ಕೆೆ ಆಗಮಿಸಿ ಲಿಂಗಸುಗೂರು, ಮಸ್ಕಿಿ, ಸಿಂಧನೂರು, ಮಾನ್ವಿಿ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಾಹ್ನ 1.30ಕ್ಕೆೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಳೆ ಹಾನಿ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮಧ್ಯಾಾಹ್ನ 2.30ಕ್ಕೆೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರತಿಕಾಗೋಷ್ಠಿಿ ನಡೆಸಲಿದ್ದಾರೆ.
ಮಧ್ಯಾಾಹ್ನ 3 ಗಂಟೆಗೆ ರಾಯಚೂರಿನಿಂದ ರಸ್ತೆೆ ಮೂಲಕ ಸೇಡಂಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೃಷ್ಣಗೌಡ ತಾಯಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.