ಸುದ್ದಿಮೂಲ ವಾರ್ತೆ
ನೆಲಮಂಗಲ,ಅ.09: ಸತ್ವಯುತವಾದ ತತ್ವಗಳನ್ನು ಅಳವಡಿಸಿಕೊಂಡು ಕೌಶಲ್ಯ ಮತ್ತು ಉದ್ಯಮಶೀಲತಾ ತರಬೇರಿ ಪಡೆದು ಸ್ವ ಉದ್ಯೋಗಸ್ಥರಾಗಬೇಕೆಂದು ಮಾನವ ಸಂಪನ್ಮೂಲ ತರಬೇತುದಾರ ಆರ್.ಕೆ.ಬಾಲಚಂದ್ರ ನೀಡಿದರು.
ನೆಲಮಂಗಲ ನಗರಸಭೆ ವ್ಯಾಪ್ತಿಯ ಅರಿಶಿನಕುಂಟೆಯಲ್ಲಿರುವ ರುಡ್ ಸೆಟ್ ಸಂಸ್ಥೆಯಲ್ಲಿ ನಡೆದ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ದುರಸ್ತಿ ಮತ್ತು ಸೇವೆ ತರಬೇತಿ ಸಮಾರೋಪ ಸಮಾರಂಭದಲ್ಲಿ ನಡೆಯಿತು.
ರುಡ್ ಸಂಸ್ಥೆ ನಿರ್ದೇಶಕ ರವಿಕುಮಾರ ಮಾತನಾಡಿ ಸಂಸ್ಥೆಯ ಮೂಲಕ ನಡೆಯುವ ವಿವಿಧ ಚಟುವಟಿಕೆಗಳ ಮಾಹಿತಿಯನ್ನು ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು.
ಸಮಾರೋಪ ಸಮಾರಂಭದಲ್ಲಿ ಮೌಲ್ಯಮಾಪಕ ನಾಗರಾಜು, ಉಪನ್ಯಾಸಕ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ಶಿಬಿರಾರ್ಥಿಗಳಿದ್ದರು.