ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.20: ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರೀಸ್ ಮತ್ತು ಕಾಮರ್ಸ್(ಬಿಸಿಐಸಿ) ಎಲ್ಲಾ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮತದಾನದ ಅರಿವು ಮೂಡಿಸಿ, ತಪ್ಪದೇ ಚುನಾವಣೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸಲು ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಕೈಗಾರಿಕೋದ್ಯಮಿಗಳಲ್ಲಿ ಕೋರಿದರು.
ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಮತ್ತು ಕಾಮರ್ಸ್(ಬಿಸಿಐಸಿ) ಎಂಜಿ ರಸ್ತೆಯ ಮಿಡ್ ಫೋಟ ಹೌಸ್ನಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಅಭಿಯಾನಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಎಲ್ಲಾ ವಲಯಗಳಲ್ಲೂ ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಮತ್ತು ಕಾಮರ್ಸ್(ಬಿಸಿಐಸಿ) ನಲ್ಲಿ ನೊಂದಣಿಯಾಗಿರುವ ಹಲವಾರು ಪ್ರಸಿದ್ಧ ಕೈಗಾರಿಗೆ, ಐಟಿ-ಬಿಟಿ ಹಾಗೂ ಇತರೆ ಮಲ್ಟಿನ್ಯಾಷನಲ್ ಕಂಪನಿಗಳಿಗೆ ತಮ್ಮ ಸಂಸ್ಥೆ ವತಿಯಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಬೇಕೆಂದು ಕೋರಿದರು.
ಬಿಸಿಐಸಿ ಅಧ್ಯಕ್ಷರಾದ ಎಲ್.ರವೀಂದ್ರನ್, ವಲಯ ಆಯುಕ್ತರಾದ ಪಿ.ಎನ್.ರವೀಂದ್ರ, ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ವಲಯ ಜಂಟಿ ಆಯುಕ್ತರಾದ ಪಲ್ಲವಿ, ಸ್ವೀಪ್ ನೋಡಲ್ ಅಧಿಕಾರಿಯಾದ ಸಿದ್ದೇಶ್ವರ್, ಸೇರಿದಂತೆ ಹಲವು ಉದ್ಯಮಿಗಳು ಉಪಸ್ಥಿತರಿದ್ದರು. ಅಲ್ಲದೆ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಹಲವು ಉದ್ಯಮಿಗಳು ಪಾಲ್ಗೊಂಡಿದ್ದರು.