ಸುದ್ದಿಮೂಲ ವಾರ್ತೆ
ಮೈಸೂರು, ಜು.20 : ಜಿಂಕೆ ಮಾಂಸವನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಕಾಡುಗಳ್ಳರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ಕೃಷ್ಣಮೂರ್ತಿ ಮತ್ತು ಓರ್ವ ಬಾಲಕ ಬಂಧಿತ ಆರೋಪಿಗಳು. ಅರಣ್ಯ ಪ್ರದೇಶಕ್ಕೆ ಅತಿಕ್ರಮ ಪ್ರವೇಶಿಸಿ ಜಿಂಕೆಯನ್ನ ಬೇಟೆಯಾಡಿ ಕೊಂದು ಮಾಂಸ ಸಾಗಿಸುತ್ತಿದ್ದರು.
ಈ ವೇಳೆ ಖಚಿತ ಮಾಹಿತಿ ಮೇರೆಗೆ ಕೌದಳ್ಳಿ ವಲಯ ಅರಣ್ಯಾಧಿಕಾರಿ ಸುಂದರ್ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನ ಬಂಧಿಸಿದ್ದಾರೆ. ಜಿಂಕೆ ಬೇಟೆಗೆ ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ರಾಮಾಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಂಧಿತ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.