ಸುದ್ದಿಮೂಲ ವಾರ್ತೆ
ಆನೇಕಲ್, ಜೂ 28 ಳ ಲಾರಿ ಹಾಗೂ ಹಾಲಿನ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡಿನ ಈರೋಡು ಮೂಲದ ಲಾರಿ ಚಾಲಕ ಉದಯ್ ಕುಮಾರ್ ಹಾಗೂ ಕ್ಲೀನರ್ ಕಾರ್ತಿಕೇಯನ್ ಮೃತಪಟ್ಟವರು.
ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ಫ್ಲೈ ಓವರ್ ಸರ್ವೀಸ್ ರಸ್ತೆಯಲ್ಲಿ ಬುಧವಾರ ಬೆಳಗ್ಗೆ 6:30 ಸಮಯದಲ್ಲಿ ಬೆಂಗಳೂರಿನಿಂದ ಹೊಸೂರು ಕಡೆಗೆ ಹೋಗುವಾಗ ಲಾರಿ ಚಾಲಕ ಅತಿ ವೇಗವಾಗಿ ಹಾಲಿನ ಗಾಡಿ ವಾಹನವನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದಾನೆ. ಆದರೆ, ಅತಿ ವೇಗವಾಗಿ ಚಲಿಸುತ್ತಿದ್ದ ಹಾಲಿನ ವಾಹನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 200 ಮೀಟರ್ ನಷ್ಟು ಬ್ಯಾರಿಕೇಡ್ ಮೇಲೆ ಹರಿಸಿದ್ದಾನೆ. ಇದರಿಂದ ಲಾರಿ ಚಾಲಕ ಉದಯ್ ಕುಮಾರ್ ಕ್ಲೀನರ್ ಕಾರ್ತಿಕೇಯನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂದಿ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ನಜ್ಜು ಗುಜ್ಜಾದ ಮೃತ ದೇಹಗಳನ್ನು ಹೊರತೆಗೆಯಲು ಹರ ಸಾಹಸ ಪಡಲಾಯಿತು. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.