ಸುದ್ದಿಮೂಲ ವಾರ್ತೆ
ಕೋಲಾರ,ಮೇ 12: ಹೆಚ್ಚಿದ ಆನೆ ಹಾವಳಿ,ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ತಾಲ್ಲೂಕಿನ ಮನ್ನನೂರು ಗ್ರಾಮದಲ್ಲಿ ಕಂಡುಬಂದಿದೆ.
ಪತಿಚೇನು ಗ್ರಾಮದ ಮಹಿಳೆ ಹಾಗೂ ಮಲ್ಲನೂರು ಪಂಚಾಯಿತಿಯ ಸಪ್ಪನಿಕುಂಟಾ ಗ್ರಾಮದ ಶಿವಲಿಂಗಂ ಎಂಬ ವ್ಯಕ್ತಿಯು ಆನೆ ದಾಳಿಗೆ ಬಲಿಯಾಗಿದ್ದಾರೆ.
ಕೋಲಾರ ಮತ್ತು ಆಂಧ್ರ ಗಡಿಭಾಗದಲ್ಲಿ ಹೆಚ್ಚಿರುವ ಕಾಡಾನೆ ದಾಳಿ. ಮನ್ನನೂರು ಗ್ರಾಮದ ಜನರಲ್ಲಿ ಭಯದ ವಾತವರಣ ಸೃಷ್ಟಿಯಾಗಿದ್ದು, ಜನರು ಮನೆಯಿಂದ ಹೊರ ಬರಲು ಆತಂಕ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಕುರಿತು ಗ್ರಾಮದ ಜನರು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.