ಸುದ್ದಿಮೂಲ ವಾರ್ತೆ ಬೆಂಗಳೂರು, ನ.20:
ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ವಿಧಾನ ಮಂಡಲದ 10 ದಿನಗಳ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆೆಗಳ ಬಗ್ಗೆೆ ಚರ್ಚಿಸಲು ಹೆಚ್ಚಿಿನ ಪ್ರಾಾಮುಖ್ಯತೆ ನೀಡಬೇಕೆಂದು ವಿಧಾನ ಪರಿಷತ್ತಿಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಾಮಿ ಒತ್ತಾಾಯಿಸಿದ್ದಾರೆ.
ಈ ಕುರಿತು ವಿಧಾನ ಪರಿಷತ್ತಿಿನ ಸಭಾಪತಿ ಬಸವರಾಜ ಹೊರಟ್ಟಿಿ ಅವರಿಗೆ ಸುದೀರ್ಘ ಪತ್ರ ಬರೆದಿರುವ ಅವರು, ಉತ್ತರ ಕರ್ನಾಟಕಕ್ಕೆೆ ಸಂಬಂಧಿಸಿದ ವಿಚಾರಗಳ ಕುರಿತು ಹೆಚ್ಚಿಿನ ಕಾಲಾವಕಾಶವನ್ನು ಮೀಸಲಿಡಬೇಕು. ರೈತರು , ಕಾರ್ಮಿಕರು, ಉದ್ಯೋೋಗಾಕಾಂಕ್ಷಿಗಳು ಮತ್ತು ಜನಸಾಮಾನ್ಯರ ಸಮಸ್ಯೆೆಗಳಿಗೆ ಸರ್ಕಾರದಿಂದ ಸ್ಪಷ್ಟ ಉತ್ತರ ದೊರೆಯುವಂತಾಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಿ ಕುರಿತು ಪ್ರತ್ಯೇಕ ಚರ್ಚೆಗೆ ಅವಕಾಶ ಕಲ್ಪಿಿಸುವುದು ಸೂಕ್ತ. ಪ್ರಾಾದೇಶಿಕ ಅಸಮತೋಲನ ಮತ್ತು ಸಮಗ್ರ ಅಭಿವೃದ್ಧಿಿಗೆ ಅಗತ್ಯವಿರುವ ಕ್ರಮಗಳನ್ನು ಜಾರಿಗೆ ತರಲು ಸರ್ಕಾರಕ್ಕೆೆ ಸೂಚಿಸಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

