ಸುದ್ದಿಮೂಲ ವಾರ್ತೆ ಮಂಡ್ಯ, ನ.06:
ರಾಜ್ಯ ಕಾಂಗ್ರೆೆಸ್ನಲ್ಲಿ ಅಧಿಕಾರ ಹಂಚಿಕೆ ವಿಷಯದ ಹಿನ್ನೆೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಯಿಂದ ಶ್ರೀ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಾಮಿ ಹೇಳಿದರು.
ಮಂಡ್ಯದ ವಿಸಿ ಾರಂನಲ್ಲಿ ನಡೆಯುತ್ತಿಿರುವ ಕೃಷಿ ಮೇಳ ಕಾರ್ಯಕ್ರಮದಲ್ಲಿ ಬುಧವಾರ ಪಾಲ್ಗೊೊಂಡು ಮಾತನಾಡಿದ ಅವರು, ಸ್ವಾಾಮೀಜಿ ಅವರಷ್ಟು ವಿದ್ಯಾಾವಂತರಾದ ಮತ್ತೊೊಬ್ಬ ಸ್ವಾಾಮೀಜಿಗಳು ಇಲ್ಲ. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಿಯಿಂದ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ ಎಂದು ಪ್ರತಿಪಾದನೆ ಮಾಡಿದರು.
ಶ್ರೀ ಬಾಲಗಂಗಾಧರನಾಥ ಸ್ವಾಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ವಾತ್ಸಲ್ಯವಿತ್ತು. ನನ್ನಿಿಂದ ಶ್ರೀ ನಿರ್ಮಲಾನಂದನಾಥ ಸ್ವಾಾಮೀಜಿಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದರು.
ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿಿವೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆೆ ನಮ್ಮ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆೆ ಇನ್ಯಾಾರೋ ಮಾತಾಡಿದ್ದಾರೆ. ನಮ್ಮ ಸ್ವಾಾಮೀಜಿಗಳು ಅವರದ್ದೆ ಆದ ಕಲ್ಪನೆಗಳನ್ನು ಹೊಂದಿರುತ್ತಾಾರೆ. ಇಂತಹ ಸ್ವಾಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಿಯಿಂದ ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಿಲ್ಲ ಎಂದು ಹೇಳಿದರು.
ಕಾರ್ಯಕ್ರಮದ ನಂತರ ಸ್ವಾಾಮೀಜಿ ಮತ್ತು ಕುಮಾರಸ್ವಾಾಮಿ ಒಂದೇ ಕಾರಿನಲ್ಲಿ ತೆರಳಿದರು.
ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ ಕೇಂದ್ರ ಸಚಿವ ಕುಮಾರಸ್ವಾಾಮಿ

