ಸುದ್ದಿಮೂಲ ವಾರ್ತೆ
ಬೆಂಗಳೂರು, ಅ. 19 : ನೈಸರ್ಗಿಕ ಕೃಷಿ ಪದ್ಧತಿ ಮತ್ತು ಜೈವಿಕ ಗೊಬ್ಬರ ಬಳಕೆಯತ್ತ ರೈತರು ಹೆಚ್ಚಿನ ಗಮನಹರಿಸಬೇಕೆಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭ ಕರಂದ್ಲಾಜೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಯೋ ಕೃಷಿ ಕಿಟ್ ಜೈವಿಕ ನಿಯಂತ್ರಣ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಕ್ಷೀಣಿಸುತ್ತಿದೆ. ರೈತ ವೈರಿ ಕೀಟಗಳೊಂದಿಗೆ ರೈತ ಸ್ನೇಹಿ ಕೀಟಗಳು ಸಾವನ್ನಪ್ಪುತ್ತಿಗಿವೆ, ಈ ಪರಿಸ್ಥಿತಿ ಬದಲಾಗಬೇಕು ಎಂದರು.
ಇಂದು ದೇಶ ಆಹಾರ, ಸಿರಿಧಾನ್ಯ, ಹಣ್ಣು ತರಕಾರಿ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಆದರೆ, ಕೀಟನಾಶಕ ಮತ್ತು ರಸಗೊಬ್ಬರ ಬಳಕೆಯಿಂದ ದೇಶದ ರಫ್ತು ನಿರೀಕ್ಷಿತ ಪ್ರಮಾಣದಲ್ಲಿ ಸಾಧ್ಯವಾಗುತ್ತಿಲ್ಲ ಎಂದರು.
ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ಸಂಶೋಧನಾ ಸಂಸ್ಥೆಗಳು ಇದರ ಬಗ್ಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕೃಷಿ ಕ್ಷೇತ್ರದಲ್ಲಿ ಪೂರ್ಣವಾಗಿ ತೊಡಗಿಕೊಂಡವರು ಆಯಾಯಾ ಗ್ರಾಮಗಳನ್ನು ದತ್ತು ಪಡೆದು, ರೈತರಲ್ಲಿ ಇದರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಸಚಿವರು ತಿಳಿಸಿದರು.