ಸುದ್ದಿಮೂಲ ವಾರ್ತೆ
ತುಮಕೂರು, ನ.04 : ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ ಆಶ್ವಿಜ ಮಹಾನಗರ ಪಾಲಿಕೆ ವ್ಯಾಪ್ತಿಯ 13ನೇ ವಾರ್ಡ್ನ ಕುರಿಪಾಳ್ಯಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿವೀಕ್ಷಣೆ ಮಾಡಿದರು.
ಪರಿವೀಕ್ಷಣೆ ಮಾಡಿದ ನಂತರ ಅವರು, ವಾರ್ಡಿನ ನಾಗರಿಕರ ಸಮಸ್ಯೆಗಳ ಕುರಿತು ಸಮಲೋಚನೆ ನಡೆಸಿದರು. ಸಮಲೋಚನೆಯಲ್ಲಿ ಬಹುಮುಖ್ಯವಾಗಿ ಸ್ವಚ್ಛತೆ, ಕುಡಿಯುವ ನೀರಿನ ಪೂರೈಕೆ ಹಾಗೂ ಒಳಚರಮಡಿ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಅಡುಗೆ ಮನೆ ಕಸ ಹಾಗೂ ಇತರೆ ತ್ಯಾಜ್ಯಗಳನ್ನು ಚರಂಡಿಗಳಿಗೆ ಸುರಿಯದಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಲಾಯಿತು.
ನಂತರ ಕುರಿಪಾಳ್ಯದಲ್ಲಿರುವ ಸಮುದಾಯ ಶೌಚಾಲಯ ಹಾಗೂ ಸ್ಮಶಾನ ಭೂಮಿಯ ಪರಿವೀಕ್ಷಣೆ ಮಾಡಿ ಸರ್ಕಾರಿ ಶಾಲೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಭಾಗದಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಪ್ರಕರಣಗಳು ಕಂಡುಬರುತ್ತಿದ್ದು, ಇದರ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ವಹಿಸಬೇಕು ಹಾಗೂ ಅಗತ್ಯ ಇರುವ ಕಡೆ ಕೂಡಲೇ ಫಾಗಿಂಗ್ ಮಾಡಲು ಆರೋಗ್ಯ ನಿರೀಕ್ಷಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಬಂಧಿಸಿದ ಮಹಾನಗರ ಪಾಲಿಕೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಯುಕ್ತರೊಂದಿಗೆ ಉಪಸ್ಥಿತರಿದ್ದರು.