ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.08:
ಸರ್ಕಾರಿ ಶಾಲೆಯಲ್ಲಿ ಒಂದು ಮಗು ಇದ್ದರೂ ಸಹ ಅಂತಹ ಕನ್ನಡ ಶಾಲೆ ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ತಿಿನ ಪ್ರಶ್ನೋೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ. ಗೌಡ ಮತ್ತು ಉಮಾಶ್ರೀ ಅವರ ಚುಕ್ಕೆೆ ಗುರುತಿನ ಪ್ರಶ್ನೆೆಗೆ ಉತ್ತರಿಸಿದ ಅವರು, ನಮ್ಮ ರಕ್ತದಲ್ಲಿ ಕನ್ನಡವಿದೆ. ನಮ್ಮ ಸರ್ಕಾರ ಬಂದ ಬಳಿಕ ಶಾಲೆ ಮುಚ್ಚುವ ಕೆಲಸ ಮಾಡಿಲ್ಲ ಎಂದು ಹೇಳಿದರು.
2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಿಕ್ (ಕೆಪಿಎಸ್) ಶಾಲೆಗಳನ್ನಾಾಗಿ ಉನ್ನತೀಕರಿಸಲಾಗುತ್ತಿಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆ ಹಂತ ಹಂತವಾಗಿ ಪ್ರಾಾರಂಭಿಸಲು ಕ್ರಮವಹಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.
ನಾವು ಬಜೆಟ್ನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ ಎಂದ ಸಚಿವರು, 2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾಾರ್ಥಿಗಳು ಕರ್ನಾಟಕ ಪಬ್ಲಿಿಕ್ ಶಾಲೆಗಳಲ್ಲಿ ವ್ಯಾಾಸಂಗ ಮಾಡುತ್ತಿಿದ್ದಾರೆ. ಈ ಕೆ.ಪಿ.ಎಸ್. ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಿಯೆ ಚಾಲ್ತಿಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಿಯೆ ಪೂರ್ಣಗೊಂಡ ನಂತರ ಪರಿಪೂರ್ಣವಾಗಿ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಿಯೆ ತರ್ಕಬದ್ದಗೊಳಿಸುವ ಮೂಲಕ ಕೆ.ಪಿ.ಎಸ್. ಶಾಲೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಕೆ.ಪಿ.ಎಸ್. ಶಾಲೆಗಳ ಧ್ಯೇಯ ವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಾಗಿ ಕಲಿಯಬೇಕು ಎಂಬ ಮಹತ್ತರ ಉದ್ದೇಶದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಿಕ್ ಶಾಲೆಗಳು ಏಕರೂಪದ ನೀತಿ ಪಾಲಿಸುವಂತೆ ’ಕರ್ನಾಟಕ ಪಬ್ಲಿಿಕ್ ಶಾಲಾ ಮಾನಕಗಳ ಕೈಪಿಡಿ ಸಿದ್ಧಪಡಿಸಲಾಗಿದ್ದು, ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳಂತೆ ಪ್ರತಿ ಶಾಲೆಯಲ್ಲಿ ಕನಿಷ್ಠ 1200 ವಿದ್ಯಾಾರ್ಥಿಗಳಿಗೆ ಅವಶ್ಯಕವಿರುವ ಸಮರ್ಪಕ ಶೈಕ್ಷಣಿಕ ಮತ್ತು ಭೌತಿಕ ಸೌಕರ್ಯ ಒದಗಿಸಿ ಉನ್ನತೀಕರಿಸಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಚಿದಾನಂದಗೌಡ, ಪ್ರತಿ ಗ್ರಾಾಮಕ್ಕೆೆ ಒಂದು ಕರ್ನಾಟಕ ಪಬ್ಲಿಿಕ್ ಶಾಲೆಯ ಅಗತ್ಯವಿದೆ. ಆದರೆ, ಆ ಮಟ್ಟಗೆ ವಿದ್ಯಾಾರ್ಥಿಗಳೂ ಸಿಗುವುದಿಲ್ಲ, ಸರ್ಕಾರಕ್ಕೂ ಅದು ಸಾಧ್ಯ ಅಗುವುದಿಲ್ಲ. ಹೀಗಾಗಿ ಕನಿಷ್ಠ ಪ್ರತಿ ಗ್ರಾಾಮ ಪಂಚಾಯತ್ ವ್ಯಾಾಪ್ತಿಿಗೆ ಅದರೂ ಒಂದರಂತೆ ಕೆಪಿಎಸ್ ಶಾಲೆಗಳನ್ನು ಪ್ರಾಾರಂಭಿಸಬೇಕು ಎಂದು ಮನವಿ ಮಾಡಿದರು.
900 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಾಗಿ ಉನ್ನತೀಕರಣ ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ : ಮಧು ಬಂಗಾರಪ್ಪ

