ಸುದ್ದಿಮೂಲವಾರ್ತೆ
ಕೊಪ್ಪಳ,ಆ.7;ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ವತಿಯಿಂದ ಹಿಟ್ನಾಳ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾದ ಇಂದ್ರಧನುಷ್ ಅಭಿಯಾನದ ಅಂಗವಾಗಿ ಮಕ್ಕಳಿಗೆ ಲಸಿಕಾ ಕಾರ್ಯಕ್ರಮಕ್ಕೆ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ ರವರು ದೀಪ ಬೆಳಗಿಸಿ, ಮಕ್ಕಳಿಗೆ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.
ನಂತರ ಲಸಿಕೆ ದಿನಾಚರಣೆಯ ಮಹತ್ವವನ್ನು ಒತ್ತಿ ಹೇಳಿದ ಶಾಸಕರು ಪೋಲಿಯೊ ವಿರುದ್ಧದ ಕಾರ್ಯತಂತ್ರದ ಹೋರಾಟವು ಲಸಿಕೆ ತಡೆಗಟ್ಟುವ ರೋಗಗಳ ವಿರುದ್ಧ ಭಾರತದ ಸಾರ್ವಜನಿಕ ಆರೋಗ್ಯ ನೀತಿಯ ಯಶಸ್ಸಿನ ಕಥೆಯಾಗಿದೆ. ನಾವು ಜಾಗರೂಕರಾಗಿರಬೇಕು ಮತ್ತು 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿ ಮಗುವಿಗೆ ಪೋಲಿಯೊ ಹನಿ ಹಾಕುವುದನ್ನು ಖಚಿತಪಡಿಸಿಕೊಳ್ಳಬೇಕು.
ಮಿಷನ್ ಇಂದ್ರಧನುಷ್ ಅಥವಾ ಪೋಲಿಯೊ ಲಸಿಕೆ ಅಭಿಯಾನದ ಉದ್ದೇಶವು ಇಂತಹ ಮಾರಕ ರೋಗಗಳಿಂದ ನಮ್ಮ ಮಕ್ಕಳನ್ನು ರಕ್ಷಿಸುವುದು. ನಮ್ಮ ಮಕ್ಕಳನ್ನು ಹೆಚ್ಚು ಹೆಚ್ಚು ರೋಗಗಳಿಂದ ರಕ್ಷಿಸಲು ನಾವು ಪ್ರಯತ್ನಗಳನ್ನು ಮಾಡುತ್ತಿರುವಾಗ, ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಲಸಿಕೆಗಳು ನಮ್ಮ ದೇಶ ಮತ್ತು ರಾಜ್ಯದ ಪ್ರತಿಯೊಂದು ಮಗುವನ್ನು ತಲುಪುವುದು ಮುಖ್ಯವಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಗ್ರಾ ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು..