ಸುದ್ದಿಮೂಲ ವಾರ್ತೆ
ಹೊಸಕೋಟೆ,ಅ.1: ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಮುಗಬಾಳ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಬಚ್ಚೇಗೌಡ, ಉಪಾಧ್ಯಕ್ಷರಾಗಿ ವೆಂಕಟಸ್ಟಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಶಿವರಾಜ್ ಘೋಷಣೆ ಮಾಡಿದ್ದಾರೆ.
ನೂತನ ಅಧ್ಯಕ್ಷರಾದ ಬಚ್ಚೇಗೌಡ ಮಾತನಾಡಿ, ರೈತರು ಉತ್ತಮವಾದ ಫ್ಯಾಟ್ ಭರಿತ ಹಾಲು ಸರಬರಾಜು ಮಾಡುವಲ್ಲಿ ಗಮನಹರಿಸಿ ಸಂಘವನ್ನು ತಾಲೂಕಿನಲ್ಲಿಯೇ ಮಾದರಿ ಸಂಘವನ್ನಾಗಿ ಮಾಡಲು ಎಲ್ಲರನ್ನೂ ಒಮ್ಮತದಿಂದ ತೆಗೆದುಕೊಂಡು ಹೋಗಿ ಸಂಘವನ್ನು ಮುನ್ನಡೆಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಂಸದ ಬಿ.ಎನ್. ಬಚ್ಚೇಗೌಡ, ಶಾಸಕ ಶರತ್ಬಚ್ಚೇಗೌಡ, ಸಹಕಾರರತ್ನ ಕೋಡಿಹಳ್ಳಿ ಸೊಣ್ಣಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೋಡಿಹಳ್ಳಿ ಸುರೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಧರ್ಮೇಶ್ ಶುಭ ಕೋರಿದ್ದಾರೆ.