ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.19: ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರ ಹುದ್ದೆಗಳ (89+47 ಹೈ.ಕ) ನೇಮಕಾತಿ ಸಂಬಂಧ ಏಪ್ರಿಲ್ 26 ಮತ್ತು 27 ರಂದು ಮೂಲದಾಖಲೆಗಳ ಪರಿಶೀಲನೆಯನ್ನು ಆಯೋಗದ ಕೇಂದ್ರ ಕಚೇರಿಯಲ್ಲಿ ನಡೆಸಲು ನಿಗದಿಪಡಿಸಲಾಗಿದೆ.
ಸಂಬಂಧಿಸಿದ ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಸೂಚನಾ ಪತ್ರಗಳನ್ನು ತ್ವರಿತ ಅಂಚೆ ಮೂಲಕ ರವಾನಿಸಲಾಗಿದೆ ಹಾಗೂ ವೇಳಾಪಟ್ಟಿಯನೊಳಗೊಂಡ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ವೆಬ್ಸೈಟ್ http://kpsc.kar.nic.in/Lists ರಡಿಯಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.