ಬೆಂಗಳೂರು: ಕನ್ನಡದ ಕಲಾಸರಸ್ವತಿ ಲೀಲಾವತಿ ಇನ್ನಿಲ್ಲ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಮೇರುನಟಿ ಶುಕ್ರವಾರ ಸಂಜೆ ನೆಲಮಂಗಲದ ತೋಟದ ಮನೆಯಲ್ಲ ಕೊನೆಯುಸಿರೆಳೆದರು.86 ವರ್ಷಗಳ ಸುದೀರ್ಘ ಜೀವನದಲ್ಲಿ ಹೋರಾಟದ ಕೆಚ್ಚಿನಿಂದಲೇ ಬದುಕಿನದ ಅವರು ಕೆಲವು ತಿಂಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ನೆಲಮಂಗಲದ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದ ಅವರಿಗೆ ಶುಕ್ರವಾರ ಸಂಜೆ ಆರೋಗ್ಯ ತೀವ್ರವಾಗಿ ಕೈಕೊಟ್ಟಿತು.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ.
ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು… pic.twitter.com/3Fa9T8O86d
— CM of Karnataka (@CMofKarnataka) December 8, 2023
ಊರಿಗೊಂದು ಪಶು ಆಸ್ಪತ್ರೆ ಕಟ್ಟಿಸಬೇಕು ಎಂಬ ಕೊನೆಯಾಸೆಯನ್ನು ಇತ್ತೀಚೆಗಷ್ಟೇ ಅವರು ತಮ್ಮ ಮಗ ವಿನೋದ್ ರಾಜ್ ಮೂಲಕ ನೆರವೇರಿಸಿಕೊಂಡಿದ್ದರು.