ಸುದ್ದಿಮೂಲ ವಾರ್ತೆ ಬೆಂಗಳೂರು, ನ.22:
ರಾಜ್ಯ ಕಾಂಗ್ರೆೆಸ್ನಲ್ಲಿ ಅಧಿಕಾರ ಹಂಚಿಕೆಯ ಕದನ ತಾರಕಕ್ಕೇರಿರುವಾಗಲೇ ಬಿಜೆಪಿಯಲ್ಲೂ ರಾಜ್ಯಾಾಧ್ಯಕ್ಷರ ನೇಮಕ ಮುನ್ನಲೆಗೆ ಬಂದಿದ್ದು, ದೆಹಲಿ ಯಾತ್ರೆೆ ನಡೆಸಿರುವ ಬಿಜೆಪಿ ರಾಜ್ಯಾಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಬಿಹಾರ ವಿಧಾನಸಭಾ ಚುನಾವಣೆ ಲಿತಾಂಶದ ನಂತರ ಬಿಜೆಪಿ ಹೈಕಮಾಂಡ್ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕಕ್ಕೆೆ ಮುಂದಾಗಿದ್ದು, ಅದಕ್ಕೂ ಮೊದಲು ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳ ಬಿಜೆಪಿ ಅಧ್ಯಕ್ಷರ ನೇಮಕಕ್ಕೂ ತೀರ್ಮಾನ ಮಾಡಿದೆ.
ಈ ಎಲ್ಲ ಬೆಳವಣಿಗೆಗಳ ನಡುವೆಯೇ ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಬಿ.ವೈ.ವಿಜಯೇಂದ್ರ ದೆಹಲಿಯಲ್ಲೇ ಮೊಕ್ಕಾಾಂ ಹೂಡಿ ವರಿಷ್ಠ ನಾಯಕರನ್ನು ಭೇಟಿ ಮಾಡಿ ಬಿಜೆಪಿ ರಾಜ್ಯಾಾಧ್ಯಕ್ಷರಾಗಿ ತಮ್ಮನ್ನು ಮುಂದುವರೆಸುವಂತೆ ಮನವಿ ಮಾಡುತ್ತಿಿದ್ದು, ಇಂದು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನಂತರ ರಾಧಾ ಮೋಹನ್ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ದೆಹಲಿಯಲ್ಲಿರುವ ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಾ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಜತೆಗೆ ಭೇಟಿ ಮಾಡಿ ಚರ್ಚಿಸಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿರುವ ಬಗ್ಗೆೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ಪಕ್ಷದ ಹಿರಿಯ ಹಾಗೂ ಮಾರ್ಗದರ್ಶಕರಾಗಿ ಸಂತೋಷ್ ಜಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ರಾಜ್ಯದಲ್ಲಿ ಪಕ್ಷ ಸಂಘಟನೆ, ಕಾಂಗ್ರೆೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆೆ ಚರ್ಚಿಸಿ ಮಾರ್ಗದರ್ಶನ ಪಡೆಯಲಾಯಿತು ಎಂದಿದ್ದಾರೆ.
ಪಕ್ಷದ ಸೈದ್ಧಾಾಂತಿಕತೆ ವೈಚಾರಿಕ ಸ್ಪಷ್ಟನೆ ಹೊಂದಿರುವ ಸಂತೋಷ್ ಅವರ ಮಾತುಗಳು ನನ್ನಂತಹ ಲಕ್ಷಾಂತರ ಕಾರ್ಯಕರ್ತರಿಗೆ ಸದಾ ಸ್ಪೂರ್ತಿ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ರಾಜ್ಯಾಾಧ್ಯಕ್ಷ ಬದಲಾವಣೆ ಸನ್ನಿಿಹಿತ: ತಮ್ಮನ್ನೇ ಮುಂದುವರಿಸಲು ಮನವಿ ಸಂತೋಷ್, ಅಗರವಾಲ್ ಭೇಟಿ ಮಾಡಿದ ವಿಜಯೇಂದ್ರ

