ಸುದ್ದಿಮೂಲ ವಾರ್ತೆ
ಮೈಸೂರು, ಆ.23: ಚಂದ್ರನ ಕಕ್ಷೆಗೆ ತೆರಳಿರುವ ವಿಕ್ರಂ ಲ್ಯಾಂಡರ್ ಯಶಸ್ವಿ ಆಗಲೆಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘಟನೆ ಹಾಗೂ ಅರ್ಚಕರ ಸಂಘದ ವತಿಯಿಂದ ಗೆ ಸರ್ವಸಿದ್ಧಿ ಯಾಗವನ್ನು ನೆರವೇರಿಸಲಾಯಿತು.
ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪುರಾತನ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸರ್ವಸಿದ್ಧಿ ಯಾಗವು ಅರ್ಚಕರ ಸಂಘದ ಅಧ್ಯಕ್ಷರು ಹಾಗೂ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ನೆರವೇರಿತು.
ಈ ವೇಳೆ ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಈ ಅಪೂರ್ವ ಸಾಧನೆಗೆ ಕಾರಣರಾದ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ಅಧ್ಯಕ್ಷರಿಗೆ ಹಾಗೂ ವಿಜ್ಞಾನಿಗಳಿಗೆ ದೇವರು ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.
ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಂತ್ ಕೃಷ್ಣಮೂರ್ತಿ, ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಸುಚಿಂದ್ರ,ಅಪೂರ್ವ ಸುರೇಶ್ ,ಎಸ್ ಎನ್ ರಾಜೇಶ್, ಆನಂದ್, ರಾಕೇಶ್ ಮತ್ತಿತರರು ಭಾಗವಹಿಸಿದ್ದರು.