ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಜೂನ್11 : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂದು ಸಾಬೀತುಪಡಿಸಿದೆ ಎಂದು ಕೆಪಿಸಿಸಿ ಸದಸ್ಯ ವಿನಯ್ ಎನ್ . ಶ್ಯಾಮ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಬಾಗ್ದಾನದಂತೆ ಸರ್ಕಾರ ಮಾತನ್ನು ಉಳಿಸಿಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡು ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ನೀಡಿ ನುಡಿದಂತೆ ನಡೆದ ಸರ್ಕಾರ ಎಂದು ಸಾಬೀತುಪಡಿಸಿದೆ.
ಮುಂದಿನ ದಿನಗಳಲ್ಲಿ ಶಾಂತಿಯ ತೋಟ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಡಳಿತ ಸರ್ಕಾರ ನೀಡಲಿದೆ. ವಿರೋಧ ಪಕ್ಷಗಳಿಗೆ ಗ್ಯಾರಂಟಿ ಅನುಷ್ಠಾನಗೊಳಿಸುವ ಮೂಲಕ ಧೃಡ ಹೆಜ್ಜೆ, ಪ್ರಾಮಾಣಿಕ ಪ್ರಯತ್ನ ಮತ್ತು ಇಚ್ಛಾಶಕ್ತಿ ತೋರಿಸುವ ಮೂಲಕ ತಿರುಗೇಟು ನೀಡಿದೆ ಎಂದರು.
ಕರ್ನಾಟಕ ರಾಜ್ಯದಲ್ಲಿ ಬದಲಾವಣೆಯನ್ನು ಬಯಸಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಪಕ್ಷಕ್ಕೆ ಜನ ಅಧಿಕಾರ ನೀಡಿದ್ದಾರೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುವ ಜೊತೆಗೆ ಮುಂಬರುವ ಲೋಕಸಭಾ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಶ್ರಮದಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಕೇಂದ್ರದಲ್ಲೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುಧ್ಧಿಚಿತ್ರ,ಜೂನ್10 ಸಿಕೆಬಿಪಿ03
ಚಿತ್ರದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ವಿ
ನಯ್ ಎನ್. ಶ್ಯಾಮ್