ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.30: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮತದಾರರಲ್ಲಿ ಜಾಗೃತಿ ಮೂಡಿಸುವ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ವಿಂಟೇಜ್ ಕಾರ್ ರ್ಯಾಲಿ ಏರ್ಪಡಿಸಲಾಗಿತ್ತು.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ರಜನೀಶ್ ಗೋಯಲ್, ಶಾಲಿನಿ ರಜನೀಶ್, ಮುಖ್ಯ ಚುನಾವಣಾಧಿಕಾರಿಯಾದ ಮನೋಜ್ ಕುಮಾರ್ ಮೀನಾ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ ಹಾಗೂ ಇನ್ನಿತರೆ ಹಿರಿಯ ಅಧಿಕಾರಿಗಳು ಚಾಲನೆ ನೀಡಿದರು.