ಸುದ್ದಿಮೂಲ ವಾರ್ತೆ
ಮೈಸೂರು, ನ.2 :ಮಹರ್ಷಿ ವಾಲ್ಮೀಕಿ ಪ್ರತಿಮೆ ನಿರ್ಮಾಣಕ್ಕೆ ಮಾಡಬೇಕು, ಇಲ್ಲದಿದ್ದರೆ ತೀವ್ರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ನಗರಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಲೋಕೇಶ್ ಪಿಯಾ, ಮೈಸೂರು ತಾಲೂಕು ಕಚೇರಿ ಮುಂಭಾಗದ ಉದ್ಯಾನವನದಲ್ಲಿ ವಾಲ್ಮೀಕಿ ಪ್ರತಿಮೆ ನಿರ್ಮಾಣ ಮಾಡಲಾಗಿತ್ತು. ಆದರೆ ಪಾಲಿಕೆ ಅಧಿಕಾರಿಗಳು ವಾಲ್ಮೀಕಿ ಜಯಂತಿ ದಿನದಂದೇ ಪ್ರತಿಮೆ ತೆರವು ಮಾಡಿದ್ದಾರೆ. ಪ್ರತಿಮೆ ನಿರ್ಮಾಣ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಆದರೆ ವಿವೇಕಾನಂದ ಸರ್ಕಲ್ ನಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ಇವರೇ ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಇವರಿಗೆ ಅನ್ವಯವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ವಾಲ್ಮೀಕಿ ಪ್ರತಿಮೆ ನಿರ್ಮಾಣಕ್ಕೆ ನಮಗೆ ಅವಕಾಶ ನೀಡಬೇಕು. ನಮಗೆ ಅವಕಾಶ ಕೊಡದೆ ಇನ್ನೊಂದು ಪ್ರತಿಮೆ ಅನಾವರಣಕ್ಕೆ ನೀವು ಅನುಮತಿ ಕೊಟ್ಟರೆ ಪಾಲಿಕೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.