ಸುದ್ದಿಮೂಲವಾರ್ತೆ
ಕೊಪ್ಪಳ, ಸೆ.19: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದಿಂದ ಇರಕಲ್ ಗಡ ಹೊಬಳಿಯ ಲೇಬಗೇರಿಯಲ್ಲಿ ವಿಶ್ವಕರ್ಮ ಜಯಂತೋತ್ಸವವನ್ನು ಆಯೋಜಿಸಲಾಗಿದೆ ಎಂದು ವಿಶ್ವಕರ್ಮ ಸಮಾಜದ ಜಯರಾಂ ಪತ್ತಾರ ತಿಳಿಸಿದ್ದಾರೆ.
ಅವರು ಇಂದು ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿ ವಿಶ್ವಕರ್ಮ ಸಮಾಜದವರಿಗೆ ಪರಿಶಿಷ್ಠ ವರ್ಗದ ಮೀಸಲಾತಿಗಾಗಿ ಹೊಬಳಿ ಮಟ್ಟದಲ್ಲಿ ನಡೆಯಲಿದೆ. ಈ ಪೂಜಾ ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಕೆ ಪಿ ನಂಜುಂಡಿ ಆಗಮಿಸಲಿದ್ದಾರೆ.
ಲೇಬಗೇರಿಯ ಮಠದ ನಾಗಮೂರ್ತೆಂದ್ರ ಸ್ವಾಮಿಗಳ ನೇತ್ರತ್ವದಲ್ಲಿ ಪೂಜಾ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಸಾವಿರಾರು ಜನರು ಭಾಗವಹಿಸಲಿದ್ದಾರೆ. ಈಗಾಗಲೇ ಎಸ್ಟಿ ಮೀಸಲಾತಿಗಾಗಿ ಕುಲಶಾಸ್ತ್ರ ಅಧ್ಯಯನ ನಡೆಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದರು.
ಈ ಸಂದರ್ಭದಲ್ಲಿ ಯುವಘಟಕದ ಬ್ರಹ್ಮಾನಂದ ಬಡಿಗೇರ, ತಾಲೂಕಾ ಅಧ್ಯಕ್ಷ ಮೌನೇಶ ಬಡಿಗೇರ ಹಾಗು ಕುಕನೂರು ಸಮಾಜದ ಅಧ್ಯಕ್ಷ ಕೃಷ್ಣಾ ಹಾಗು ಮಂಜುನಾಥ ಇದ್ದರು.