ಸುದ್ದಿಮೂಲ ವಾರ್ತೆ
ಮೈಸೂರು, ಸೆ.23:ಕನ್ನಡಿಗರ ಹಿತ ಕಡೆಗಣಿಸಿ ಕರ್ನಾಟಕ ಕಾಂಗ್ರೆಸ್ ಸರಕಾರ ಏಕಪಕ್ಷೀಯವಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಪರಿಣಾಮದಿಂದ ಕೆಆರ್ಎಸ್ ಸೇರಿದಂತೆ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಟೀಕಿಸಿದರು.
ಶನಿವಾರ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಅವರು, ರಾಜ್ಯದ ಪಾಲಿನ ಸಮೃದ್ಧಿಯ ಸಂಕೇತ ಕನ್ನಂಬಾಡಿ ಅಣೆಕಟ್ಟೆ ಭಣಗುಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮುನಿರತ್ನ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ನಿಖಿಲ್ ಕುಮಾರ್, ಪಕ್ಷದ ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್ ಸೇರಿ ಪಕ್ಷದ ಹಲವಾರು ಪ್ರಮುಖ ಮುಖಂಡರು ಅವರ ಜತೆಯಲ್ಲಿ ಇದ್ದರು.