ಸುದ್ದಿಮೂಲ ವಾರ್ತೆ
ಮೈಸೂರು, ಅ.18 : ಮೈಸೂರಿನ ಮಹಾರಾಣಿ ಕಲಾ ಮತ್ತು ವಿಜ್ಞಾನ ಮಹಿಳಾ ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ. ಸುಧಾಕರ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯರ ಕುಂದು ಕೊರತೆ ವಿಚಾರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇತಿಹಾಸವುಳ್ಳ ಮಹಾರಾಣಿ ಕಾಲೇಜುಗಳಲ್ಲಿ ಕಟ್ಟಡದ ಹಾಗೂ ವಸತಿ ನಿಯಮ ಕೊರತೆ ಕಂಡುಬಂದಿದೆ. ಈಗಾಗಲೇ ಮಹಾರಾಣಿ ಕಲಾ ಕಾಲೇಜಿಗೆ 17 ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ವಿಜ್ಞಾನ ಕಾಲೇಜಿನಲ್ಲಿ ಐತಿಹಾಸಿಕ ಕಟ್ಟಡವಾಗಿದ್ದು ಸಾಕಷ್ಟು ಸಮಸ್ಯೆ ಇದೆ. ಹಾಗಾಗಿ ಜಿಲ್ಲಾಧಿಕಾರಿ ಹಾಗೂ ಪುರಾತತ್ವ ಇಲಾಖೆ ಜೊತೆ ಮಾತುಕತೆ ನಡೆಸಲಾಗಿದೆ ಐದು ಅಂತಸ್ತಿನ ಮಹಡಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಪಾರಂಪರಿಕ ಕಟ್ಟಡ ಶೈಲಿಯಲ್ಲಿ ಕಟ್ಟಲಾಗುವುದು ಎಂದರು.
ಮಹಾರಾಣಿ ಕಲಾ ಮತ್ತು ವಿಜ್ಞಾನ ಮಹಿಳಾ ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಒಟ್ಟು 140 ಕೋಟಿ ವೆಚ್ಚದಲ್ಲಿ ದುರಸ್ತಿ ಕಾಮಗಾರಿ ನಿರ್ಮಾಣಕ್ಕೆ ಈಗಾಗಲೇ ನಿರ್ಧರಿಸಲಾಗಿದ್ದು ಸದ್ಯದಲ್ಲೇ ಜನವರಿ ನಂತರ ಕೆಲಸ ಪ್ರಾರಂಭ ಮಾಡಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಮರೀತಿಬ್ಬೆಗೌಡ, ಶಾಸಕ ಕೆ. ಹರೀಶ್ ಗೌಡ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.