ಬೆಂಗಳೂರು, ಏ.27: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿವೇಕ ಯುಗ ಫೌಂಡೇಶನ್ ವತಿಯಿಂದ ಏ.29 ರಂದು ಬೆಳಿಗ್ಗೆ 7 ಗಂಟೆಯಿಂದ 9ರವರೆಗೆ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಯಿಂದ, ಕೆ.ಆರ್. ಸರ್ಕಲ್ ಮಾರ್ಗವಾಗಿ ಕಂಠೀರವ ಸ್ಟೇಡಿಯಂವರೆಗೆ ಮತದಾರರಲ್ಲಿ ಅರಿವು ಮೂಡಿಸಲು ಮತದಾನ “ಜಾಗೃತಿ ಜಾಥಾ 2023′ ಆಯೋಜಿಸಲಾಗಿದೆ.
ಚುನಾವಣಾ ಆಯೋಗ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್.ಎಸ್.ಎಸ್ ಕೋಶ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು, ಮತ್ತು ಮತದಾರರ ಸಾಕ್ಷರತಾ ಕ್ಲಬ್ ಇವರ ಸಹಯೋಗದಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ.
ಜಾಥಾದಲ್ಲಿ ಅನೇಕ ಗಣ್ಯರು ಹಾಗೂ 7000 ಕ್ಕೂ ಹೆಚ್ಚು, ಎನ್.ಎಸ್.ಎಸ್. ಸ್ವಯಂ ಸೇವಕ / ಸೇವಕಿಯರು ಭಾಗವಹಿಸುವುದರ ಮೂಲಕ ಜಾಗೃತಿಯನ್ನು ಮೂಡಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪ್ರಶಾಪ್ ಲಿಂಗಯ್ಯ, ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಇವರ ದೂ.ಸಂ.9742301000 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.