ಸುದ್ದಿಮೂಲ ವಾರ್ತೆ
ಮೈಸೂರು, ಸೆ.6:ಜಂಬೂಸವಾರಿಯ ಚಿನ್ನದ ಅಂಬಾರಿ ಹೊತ್ತು ಸಾಗುವ ಅಭಿಮನ್ಯು ತೂಕದಲ್ಲೂ ಬಲಶಾಲಿಯಾಗಿದ್ದಾನೆ. ಅರಮನೆಯಲ್ಲಿ ಬೀಡುಬಿಟ್ಟಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಬುಧವಾರ ತೂಕ ಪರೀಕ್ಷೆ ನಡೆಸಲಾಯಿತು.
ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ಮೊದಲ ಹಂತದಲ್ಲಿ 8 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು. ಪೊಲೀಸರ ಬಿಗಿ ಭದ್ರತೆಯಲ್ಲಿ ಗಜಪಡೆ ಕರೆತರಲಾಗಿತ್ತು. ತೂಕದಲ್ಲಿ ಕ್ಯಾಪ್ಟನ್ ಅಭಿಮನ್ಯುನೇ ಬಲಶಾಲಿಯಾಗಿದ್ದಾನೆ. ದಸರಾ ಗಜಪಡೆಯ ತೂಕದ ವಿವರ ಅಭಿಮನ್ಯು – 5,160 ಕೆಜಿ.
ಯಾರ್ಯಾರು ಎಷ್ಟು ಕೆಜಿ ?
ವಿಜಯ – 2,830 ಕೆಜಿ.
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ– 5,080 ಕೆಜಿ