ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಜು.16: ತಾಲ್ಲೂಕಿನ ಹಂಡಿಗನಾಳ ಬಳಿ ಇರುವ ಶ್ರೀ ಬಾಲಾಜಿ ಕನ್ವೆನ್ಷನ್ ಹಾಲ್ ನಲ್ಲಿ ನಗರದ ಶ್ರೀ ಶಾರದ ವಿದ್ಯಾ ಸಂಸ್ಥೆ ಹಾಗೂ ಎ.ಆರ್. ಎಂ ಪಿಯು ಕಾಲೇಜಿನ ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರು ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ವೇದಿಕೆ ಗಣ್ಯರಿಂದ ದೀಪ ಬೆಳಗುವುದರ ಮೂಲಕ ಉದ್ಘಾಟನೆ ಮಾಡಲಾಯಿತು.
ಶ್ರೀ ಶಾರದ ವಿದ್ಯಾ ಸಂಸ್ಥೆ ಹಾಗೂ ಎ ಆರ್ ಎಂ ಕಾಲೇಜು ವತಿಯಿಂದ 2022- 23ನೇ ಸಾಲಿನ ಎಸ್. ಎಸ್. ಎಲ್. ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಮೂಡ್ನಾಕೂಡು ಚಿನ್ನಸ್ವಾಮಿ, ಅಕ್ಕಾ ಐಎಎಸ್ ಅಕಾಡೆಮಿಯ ಸಂಸ್ಥಾಪಕ ಡಾ. ಶಿವಕುಮಾರ್, ಹೈಕೋರ್ಟ್ ವಕೀಲರಾದ ಹರಿರಾಮ್. ಎ, ಶ್ರೀ ಶಾರದಾ ವಿದ್ಯಾ ಸಂಸ್ಥೆ ಯ ಅಧ್ಯಕ್ಷ ಎ ಆರ್ ಮುನಿರತ್ನಂ, ಕಾರ್ಯದರ್ಶಿ ಶ್ರೀಕಾಂತ್, ಆರ್ ಎಂ ಕಾಲೇಜಿನ ಪ್ರಾಂಶುಪಾಲರಾದ ಕೆ.ಮೂರ್ತಿ, ಗುತ್ತಿಗೆದಾರ ಬಶೆಟಹಳ್ಳಿ ದ್ಯಾವಪ್ಪ, ಡಿಎಸ್ಎಸ್ ತಾಲ್ಲೂಕು ಸಂಚಾಲಕ ಟಿ.ಎ ಚಲಪತಿ ಹಾಗೂ ಶ್ರೀ ಶಾರದಾ ವಿದ್ಯಾ ಸಂಸ್ಥೆ ಹಾಗೂ ಎ ಆರ್ ಎಂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.