ಸುದ್ದಿಮೂಲ ವಾರ್ತೆ
ಮೈಸೂರು, ಏ.29:ವಿಧಾನಸಭಾ ಚುನಾವಣೆ ವೇಳೆ ಪದೇ ಪದೇ ರಾಜ್ಯಕ್ಕೆ ಆಗಮಿಸಿ ಪ್ರಚಾರ ರೋಡ್ ಶೋಗಳಲ್ಲಿ ಪಾಲ್ಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ರಾಜ್ಯಕ್ಕೆ ಏನು ? ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.
ಇದೇ ಸಂದರ್ಭದಲ್ಲಿ ತಮ್ಮಿಂದ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರಿಂದ ಬಿಜೆಪಿ ಅಧಿಕಾರಕ್ಕೆ ಬಂತು ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರು ಭ್ರಷ್ಟ ಬಿಜೆಪಿಯನ್ನು ಮೊದಲು ಸರಿಪಡಿಸಲಿ. ಹಿಂದಿ ಹೇರಿಕೆಯನ್ನು ನಿಲ್ಲಿಸಿ. ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರಬೇಡಿ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಭೇಟಿಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ರಾಜ್ಯದ ಹಲವೆಡೆ ತ್ರಿಕೋನ ಸ್ಪರ್ಧೆ ಮತ್ತೆ ಕೆಲವೆಡೆ ನೇರ ಸ್ಪರ್ಧೆ ಏರ್ಪಡುವ ಲಕ್ಷಣಗಳು ಕಂಡು ಬಂದಿವೆ ಎಂದು ವಿಶ್ಲೇಷಣೆ ಮಾಡಿದರು.