ಸುದ್ದಿಮೂಲ ವಾರ್ತೆ ಮೈಸೂರು, ನ.10:
ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯದ ಪ್ರಮಾಣ ಎಷ್ಟಿಿದೆ? ಯಾವ ಭಾಗಗಳಲ್ಲಿ ವಿಸ್ತರಣೆ ಆಗಿದೆ, ಕಾಡು ಪ್ರಾಾಣಿ- ಮಾನವರ ನಡುವಿನ ಸಂಘರ್ಷಕ್ಕೆೆ ವೈಜ್ಞಾನಿಕ ಕಾರಣಗಳೇನು ಎಂಬ ಬಗ್ಗೆೆ ಮಾಹಿತಿಯನ್ನು ಸೂಕ್ತ ರೀತಿಯಲ್ಲಿ ನೀಡಲು ಸೋಮವಾರ ನಡೆದ ಮೈಸೂರು ಜಿಲ್ಲೆ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ತಡಬಡಾಯಿಸಿದ ಅಧಿಕಾರಿಗಳ ವಿರುದ್ದ ಸಿಎಂ ಸಿದ್ದರಾಮಯ್ಯ ಗರಂ ಆದರು.
ಸರಿಯಾದ ಮಾಹಿತಿ ತರದೆ ಅತ್ತೆೆ ಮನೆಗೆ ಬಂದಂತೆ ಕೈ ಬೀಸಿಕೊಂಡು ಬರ್ತೀರಾ? 25 ವರ್ಷದಿಂದ ಕೆಲಸ ಮಾಡಿ ರೈತರ ಜಮೀನಿನಲ್ಲಿ ಎಷ್ಟು ಗಿಡ ನೆಟ್ಟಿಿದ್ದೀರಿ? ಎಷ್ಟು ಎಕರೆ ಗಿಡ ಬೆಳೆಸಿದ್ದೀರಿ ಎನ್ನುವ ಮಾಹಿತಿ ಇಲ್ಲದಿದ್ದರೆ ನಿಮ್ಮ ಕಾರ್ಯಕ್ಷಮತೆ ಇಷ್ಟೆೆನಾ?, ಕಾಡು- ನಾಡಿನ ವಾಸಿಗಳ ನಡುವೆ ಘರ್ಷಣೆ ಮಾಹಿತಿಗಾಗಿ ನಾನು ನಿಮ್ಮ ಮನೆಗೆ ಬರಬೇಕಾ? ಎಂದು ಏರಿದ ಧ್ವನಿಯಲ್ಲಿ ಪ್ರಶ್ನಿಿಸಿದರು.
ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ? ವೈಜ್ಞಾನಿಕ ಕಾರಣ ನೀಡಿ: ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ. ಪರಿಹಾರ ಕ್ರಮಗಳನ್ನು ತುರ್ತು ತೆಗೆದುಕೊಳ್ಳಬೇಕೆಂದು ತಾಕೀತು ಮಾಡಿದರು.
ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು. ಲಾಂಟೆನಾ ತೆಗೆಸಬೇಕು ಅರಣ್ಯದಲ್ಲಿ ಮೇವು ಬೆಳೆಸಬೇಕು . ಆನೆ, ಹುಲಿಗಳು ಹೊರಗೆ ಬರುವ ಬಗ್ಗೆೆ ನಿರಂತರ ನಿಗಾ ವಹಿಸಬೇಕು ಅರಣ್ಯ ಪ್ರಾಾಣಿ ಮತ್ತು ಮಾನವ ಸಂಘರ್ಷ ತಪ್ಪಿಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆೆ ಅಧ್ಯಯನ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು ಎಂದು ಸಿಎಂ ಸೂಚಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿಿ ಮಾತನಾಡಿ, ಅರಣ್ಯ ಹಕ್ಕು ಕಾಯ್ದೆೆಗೆ ಬಂದಿರುವ 7 ಸಾವಿರ ಅರ್ಜಿಗಳಲ್ಲಿ 5900 ಅರ್ಜಿಗಳು ತಿರಸ್ಕಾಾರ ಆಗಿರುವುದಕ್ಕೆೆ ಕಾರಣ ಏನು ?, ಇವು 2019-20 ರಿಂದ ತಿರಸ್ಕರಿಲ್ಪಟ್ಟ ಅರ್ಜಿಗಳು. ತಿರಸ್ಕರಿಸುವಾಗ ಸ್ಪಷ್ಟವಾದ, ನೈಜವಾದ ಕಾರಣ ನೀಡದಿದ್ದರೆ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಿಗಳಿಗೆ ತಿಳಿಸಿದರು.
ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಆಗಬೇಕು. ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎನ್ನುವ ಸೂಚನೆ ನೀಡಿದರು.
ಎಸಿಎ್, ಆರ್ಎ್ಓ ನಡುವೆ ಹೊಂದಾಣಿಕೆ ಇಲ್ಲ: ಚಿಕ್ಕಮಾದು
ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಹೆಚ್.ಡಿ.ಕೋಟೆಯಲ್ಲಿ ಎಸಿಎ್, ಆರ್ಎ್ಓಗಳ ನಡುವೆ ಹೊಂದಾಣಿಕೆ ಇಲ್ಲ. ಇದರ ಪರಿಣಾಮ ಸಮಸ್ಯೆೆಗಳು ಹೆಚ್ಚಾಾಗಿವೆ ಎಂದು ಮುಖ್ಯಮಂತ್ರಿಿಗಳ ಗಮನಕ್ಕೆೆ ತಂದರು.
ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯಲೋಪದಿಂದ ಮಾನವ ಜೀವ ಹಾನಿ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹಾದೇವಪ್ಪ ಮಾತನಾಡಿ ಹುಲಿಗಳು ಅರಣ್ಯ ಪ್ರದೇಶ ಬಿಟ್ಟು ಜನರು ವಾಸಿಸುವ ಸ್ಥಳಕ್ಕೆೆ ಬರುತ್ತಿಿರುವುದಕ್ಕೆೆ ವೈಜ್ಞಾನಿಕ ಕಾರಣ ಇರುತ್ತದೆ. ಅದನ್ನು ಸಾರ್ವಜನಿಕರಿಗೆ ತಿಳಿಸಬೇಕು. ಇಲ್ಲವಾದಲ್ಲಿ ಅರಣ್ಯದಲ್ಲಿ ಆಹಾರ ನೀರು ಇಲ್ಲದೆ ಕಾಡಿನಿಂದ ಪ್ರಾಾಣಿಗಳು ಹೊರಗೆ ಬರುತ್ತದೆ ಎಂಬ ಅಭಿಪ್ರಾಾಯಕ್ಕೆೆ ಜನರು ಬರುತ್ತಾಾರೆ ಎಂದರು
ಕುರಿಗಾಹಿಗಳಿಗೆ ಆಗುತ್ತಿಿದ್ದ ತೊಂದರೆಗಳು ಮತ್ತು ಕಳ್ಳ ಕಾಕರಿಂದ ರಕ್ಷಣೆ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದಿಲ್ಲ ಎನ್ನುವ ವರದಿಯನ್ನು ಅಧಿಕಾರಿಗಳು ಸಭೆಗೆ ನೀಡಿದರು.
ನೀಲಗಿರಿ ನಿಷೇಧ ಆದ ಮೇಲೂ ಮತ್ತೆೆ ನೀಲಗಿರಿ ಪ್ಲಾಾಂಟೇಷನ್ ಕಾಣಿಸುತ್ತಿಿರುವುದರ ಬಗ್ಗೆೆ ಶಾಸಕರಾದ ತನ್ವೀರ್ ಸೇಠ್ ಅವರು ಸಭೆಯ ಗಮನಕ್ಕೆೆ ತಂದರು.
ಇದಕ್ಕೆೆ ಉತ್ತರಿಸಿದ ಅರಣ್ಯಾಾಧಿಕಾರಿಗಳು ಹೊಸದಾಗಿ ನೀಲಗಿರಿ ಪ್ಲಾಾಂಟೇಷನ್ಗೆ ಅವಕಾಶ ನೀಡಿಲ್ಲ. ಇರುವ ಬೆಳೆ ಕಟಾವು ಆದ ಬಳಿಕ ಅಲ್ಲಿ ಮತ್ತೆೆ ಬೆಳೆಯಲು ಅವಕಾಶವಿಲ್ಲ ಎಂದು ಉತ್ತರಿಸಿದರು.
ಹಾಲಿನ ಉತ್ಪಾಾದನೆ ಜಿಲ್ಲೆಯಲ್ಲಿ ದಿನೇ ದಿನೆ ಹೆಚ್ಚಾಾಗುತ್ತಿಿರುವುದರ ಅಂಕಿ – ಅಂಶಗಳನ್ನು ಮುಂದಿಟ್ಟ ಮುಖ್ಯಮಂತ್ರಿಿ ಸಿದ್ದರಾಮಯ್ಯ, ಉತ್ಪಾಾದನೆ ಹೆಚ್ಚಾಾದ ಹಾಗೆ ಮಾರುಕಟ್ಟೆೆ ವಿಸ್ತರಿಸಲು ಸಿದ್ಧತೆ ಮಾಡಿಕೊಳ್ಳಿಿ ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ಸೂಚಿಸಿದರು.

