ಸುದ್ದಿಮೂಲ ವಾರ್ತೆ
ಆನೇಕಲ್, ಮಾ.28: ತಾಲೂಕಿನ ಕರ್ಪೂರು ಗ್ರಾಮ ಪಂಚಾಯಿತಿ ಮತ್ತು ಸಂಜೀವಿನಿ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ವಿಧಾನ ಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ ಹಾಗು ಸಿಡಿಪಿಒ ಕವಿತಾ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಇದೇ ವೇಳೆ ಮಾತನಾಡಿದ ಗೋಪಿನಾಥ ರೆಡ್ಡಿ, ಮಹಿಳೆಯ ಏಳಿಗೆಗಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಅದರಲ್ಲೂ ಆರ್ಥಿಕವಾಗಿ ಶೈಕ್ಷಣಿಕವಾಗಿ ರಾಜಕೀಯವಾಗಿ ಅವಕಾಶವನ್ನು ಸಿಗುವಂತ ಕೆಲಸ ಮಾಡಬೇಕಾಗಿದೆ. ಸಾಮಾಜಿಕ ಸ್ಥಿತಿಗತಿ ಆಧಾರದ ಮೇಲೆ ಮಹಿಳೆ ಅಭಿವೃದ್ಧಿ ಅಳೆಯ ಬೇಕೆ ಹೊರತು ಬೇರೆ ಕಾರಣಗಳಿಂದ ಅಲ್ಲ. ಹಾಗಾಗಿ ಮಹಿಳೆಯರಿಗೆ ಜಾಗೃತಿ ಮಾಡಿಸುವ ಕೆಲಸ ಮಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಸಿಡಿಪಿಓ ಕವಿತಾ ಮಾತನಾಡಿ, ಮಹಿಳೆಯರು ಸ್ಥಳೀಯ ಮಟ್ಟದಲ್ಲಿ ಮಾಡಿದ ಕೆಲಸಗಳನ್ನು ಗುರುತಿಸಿ ಅವರನ್ನು ಬೆನ್ನುತಟ್ಟುವ ಕೆಲಸ ಮಾಡಿದರೆ ಇನ್ನಷ್ಟು ಮಹಿಳೆಯರು ಒಳ್ಳೆಯ ಕೆಲಸ ಮಾಡಲು ಮುಂದೆ ಬರುತ್ತಾರೆ. ರಾಜಕಿಯವಾಗಿ ಶೈಕ್ಷಣಿಕವಾಗಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರು ಮುಂದೆ ಬರಬೇಕು ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳಿಗೆ ಸಹಾಯಧನ ಮತ್ತು ಕೊರೋನ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಕೆಲಸ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕುಮಾರ್(ಪ್ರಭಾರ), ಅಧ್ಯಕ್ಷ ವೆಂಕಟೇಶ್ ಗೌಡ, ಸಿಬ್ಬಂದಿಗಳಾದ ಸೋಮಪ್ಪ,ಮುನಿಕೃಷ್ಣ,ಸುಬ್ಬು,ಮತ್ತು ಸರ್ಕಾರಿ ಅಧಿಕಾರಿಗಳು, ಗ್ರಾಮದ ಮಹಿಳೆಯರು ಭಾಗವಹಿಸಿದ್ದರು.