ಸುದ್ದಿಮೂಲ ವಾರ್ತೆ
ಅ. 10 : ಲಿಂಗ ಸಮಾನತೆ ಮತ್ತು ವೈವಿಧ್ಯತೆ ಕುರಿತು ಚುನಾಯಿತ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಮಾತನಾಡಿ, ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿಯನ್ನು ನೀಡಿದ್ದು, ಗ್ರಾಮ ಪಂಚಾಯಿತಿಯ ಎಲ್ಲಾ ಪ್ರಕ್ರಿಯೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ.
ಅದೇ ರೀತಿಯಾಗಿ ಪುರುಷ ಪ್ರಧಾನವಾದ ನಮ್ಮ ವ್ಯವಸ್ಥೆಯಲ್ಲಿ ಮಹಿಳೆಯರು ಭಾಗವಹಿಸಿದು ಕಡಿಮೆ. ನಿರ್ಣಯಗಳಲ್ಲಿ ಮಹಿಳೆಯರ ಪಾತ್ರ ಶೂನ್ಯ ಎಂದರು.
ಈ ನಿಟ್ಟಿನಲ್ಲಿ ಗ್ರಾಮಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿ ಹಿತದೃಷ್ಟಿಯಿಂದ ಚುನಾಯಿತ ಮಹಿಳಾ ಗ್ರಾಮ ಪಂಚಾಯಿತಿ ಸದಸ್ಯರ ಪಾತ್ರವು ಗುರುತರವಾಗಿದ್ದು ಮತ್ತು ಸಮಾಜದಲ್ಲಿ ಲಿಂಗ ಸಮಾನತೆ ಕುರಿತು ಅರ್ಥ ಮಾಡಿಕೊಳ್ಳುವುದು ತುಂಬಾ ಅತ್ಯಗತ್ಯವಾಗಿದೆ ಎಂದರು.
ಮಹಿಳಾ ಗ್ರಾಮ ಪಂಚಾಯಿತಿ ಸದಸ್ಯರಿಗೂ ಅವಕಾಶಗಳನ್ನು ಒದಗಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಲಿಂಗಸಮಾನತೆಗಾಗಿ ಅವಕಾಶಗಳನ್ನು ಒದಗಿಸಿ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಚುನಾಯಿತ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತರಬೇತಿ ಕಾರ್ಯಾಗಾರದಲ್ಲಿ ಹಾಜರಿದ್ದರು.