ಸುದ್ದಿಮೂಲ ವಾರ್ತೆ
ತುಮಕೂರು, ಮೇ 29: ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್, ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೇ 31ರಂದು ಬೆಳಿಗ್ಗೆ 9ಗಂಟೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
“ನಮಗೆ ಆಹಾರ ಬೇಕು ತಂಬಾಕು ಬೇಡ” ಎಂಬ ಘೋಷ ವಾಕ್ಯದೊಂದಿಗೆ ಸಾರ್ವಜನಿಕರಿಗೆ ತಂಬಾಕು
ದುಷ್ಪರಿಣಾಮ ಹಾಗೂ ಕೋಟ್ಪಾ ಕಾನೂನು-2023ರ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತುಮಕೂರು
ಮಹಾನಗರಪಾಲಿಕೆ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರೆಗೆ ಜಾಥಾ
ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.