ಪ್ರದರ್ಶಕರ ಆಯ್ಕೆೆಯ ಹಕ್ಕಿಿನ ವಿಚಾರ ಇಲ್ಲಿದೆ. ಈ ಹಿಂದೆ ಸರ್ಕಾರವು ಇಂಥದ್ದೇ ಆದೇಶವನ್ನು ಹಿಂಪಡೆದಿತ್ತು. ಈಗ ಮತ್ತದೇ ಆದೇಶವನ್ನು ಹೊರಡಿಸಲಾಗಿದೆ. 2017ರಲ್ಲಿ ರಾಜ್ಯ ಸರ್ಕಾರ ಇಂಥದ್ದೇ ಆದೇಶ ಮಾಡಿತ್ತು. ಈಗ ನಿಯಮಗಳಿಗೆ ತಿದ್ದುಪಡಿ ಮಾಡಿ ಸಿನಿಮಾ ದರ ನಿಗದಿಪಡಿಸಲಾಗಿದ್ದು, ಇತಿಹಾಸ ಮರುಕಳಿಸಿದೆ ಎಂದಿದ್ದರು. ಸಿನಿಮಾ ಹಾಲ್‌ಗಳನ್ನು ರೂಪಿಸಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಇಂತಿಷ್ಟೇ ಸೀಟುಗಳಿಗೆ ಸೀಮಿತಗೊಳಿಸಿ ಅಗತ್ಯ ಸೌಲಭ್ಯಗಳೊಂದಿಗೆ ಸಿನಿಮಾ ಹಾಲ್‌ಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಸರ್ಕಾರವು 200 ರೂಪಾಯಿ ಅಥವಾ ಇಂತಿಷ್ಟೇ ದರಕ್ಕೆೆ ಟಿಕೆಟ್ ಮಾರಾಟ ಮಾಡಬೇಕು ಎಂದು ಹೇಳಲಾಗದು. ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025 ಅಡಿ ದರ ನಿಗದಿಯು ಕಾನೂನುಬಾಹಿರ ಕ್ರಮವಾಗಿದೆ ಎಂದಿದ್ದರು. ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊೊಕೇಟ್ ಜನರಲ್ ಇಸ್ಮಾಾಯಿಲ್ ಜಬೀವುಲ್ಲಾ ಅವರು ಸಾರ್ವಜನಿಕರ ಹಿತದೃಷ್ಟಿಿಯಿಂದ ಟಿಕೆಟ್ ದರ ನಿಗದಿಪಡಿಸಲಾಗಿದೆ. ಇದನ್ನು ಬಜೆಟ್‌ನಲ್ಲಿ ಸರ್ಕಾರ ಘೋಷಿಸಿತ್ತು. ಸಂವಿಧಾನದ ಅಡಿ ನಿಯಂತ್ರಣ ಕೈಗೊಳ್ಳಲು ಸರ್ಕಾರಕ್ಕೆೆ ಅವಕಾಶವಿದೆ. ಹೀಗಾಗಿ, ಆಕ್ಷೇಪಾರ್ಹವಾದ ಆದೇಶಕ್ಕೆೆ ತಡೆ ನೀಡಬಾರದು ಎಂದು ಕೋರಿದ್ದರು.