ಸುದ್ದಿಮೂಲ ವಾರ್ತೆ
ಆನೇಕಲ್,ಜೂ.21: ತಾಲೂಕಿನ ಸಮಂದೂರು ಗ್ರಾಮ ಪಂಚಾಯಿತಿಯ ಕುವೆಂಪುನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮುಖ್ಯ ಶಿಕ್ಷಕಿ ನೇತ್ರಾವತಿ, ಮಕ್ಕಳಿಗೆ ಯೋಗವು ಬದಲಾವಣೆಯ ಸಾಧನವಾಗಿದೆ. ಅದನ್ನು ರೂಡಿಸಿಕೊಂಡರೆ ನಿಮ್ಮ ಸ್ವಂತ ಸಾಮರ್ಥ್ಯವನ್ನು ನೀವು ನಂಬಲು ಪ್ರಾರಂಭಿಸುತ್ತೀರಿ ಎಂದು ಮಕ್ಕಳಿಗೆ ಹೇಳಿದರು.
ಸಹ ಶಿಕ್ಷಕಿ ವಿನುತಾ ಯೋಗದ ಬಗ್ಗೆ ಅರಿವನ್ನು ಮೂಡಿಸಿದರು. ಯೋಗ ಮಾಡಿದರೆ ಮನಸ್ಸು ಶುಚಿಯಾಗಿರುವುದು, ಕೋಪ ನಿಗ್ರಹವಾಗಲಿದೆ . ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಜಾಗೃತಿಗಾಗಿ ಅತ್ಯವಶ್ಯಕ. ಯೋಗಭ್ಯಾಸವನ್ನು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ರೂಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳೋಣ ಎಂದರು.
ಸಹ ಶಿಕ್ಷಕಿ ಸವಿತಾ, ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಭಾರತ ದೇಶವು ಸರ್ವಶ್ರೇಷ್ಠವಾಗಿದೆ. ಆಧುನಿಕ ಜಗತ್ತಿನಲ್ಲಿ ಯೋಗವನ್ನು ತೊರೆದು ಬಾಳುವಂತಹ ಮನುಷ್ಯನಿಲ್ಲ ಎಂದು ತಿಳಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಎಲ್ಲಾ ಶಿಕ್ಷಕರು ಮತ್ತು ಮಕ್ಕಳೆಲ್ಲರೂ ಸೇರಿ ಯೋಗವನ್ನು ಮಾಡುವ ಮೂಲಕ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.