ಸುದ್ದಿಮೂಲ ವಾರ್ತೆ
ಕೆ.ಆರ್.ಪುರ ಜೂ:21 : ಜೀವನದಲ್ಲಿ ಯೋಗ ಅಭ್ಯಾಸದಿಂದ ಜೀವನ ಶೈಲಿ ಹಾಗೂ ಸಧೃಡ ವ್ಯಕ್ತಿತ್ವ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದು ಯೋಗ ಪಟು, ತರಬೇತುದಾರ ಆನಂದ ಹಾನಗಲ್ ಹೇಳಿದರು.
ಕೆ.ಆರ್.ಪುರ ಸಮೀಪದ ಹೂಡಿಯ ಗೋಪಾಲನ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಆಧುನಿಕ ಜೀವನ ಶೈಲಿಯಿಂದ ಮಾನಸಿಕ ಒತ್ತಡ ಹೆಚ್ಚುತ್ತಿದ್ದು, ಒತ್ತಡವನ್ನು ನಿಯಂತ್ರಿಸಲು ಯೋಗ ಸಹಕಾರಿಯಾಗಿದೆ. ಆರೋಗ್ಯಕರ ಜೀವನ ಸಾಗಿಸಲು ಯೋಗ ಮಹತ್ವದ್ದು ಎಂದರು.
ಗೋಪಾಲನ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಕ ಅಧಿಕಾರಿ ಡಾ.ಭಾಸ್ಕರ ರೆಡ್ಡಿ ಮಾತನಾಡಿ, ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಜೊತೆಗೆ ದೈಹಿಕ ಮಾನಸಿಕ ಆರೋಗ್ಯ ರಕ್ಷಣೆಗೆ ಯೋಗ ಮುಖ್ಯವಾಗಿದೆ. ವಿದ್ಯಾರ್ಥಿಗಳು ಪ್ರತಿ ದಿನ ಯೋಗ ಮಾಡಿ ಎಂದು ಸಲಹೆ ನೀಡಿದರು.
ಐನೂರಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರು ಯೋಗ ಶಿಬಿರದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಭಂಗಿಗಳ ಯೋಗಾಸನ ಅಭ್ಯಾಸ ಮಾಡಿಸಲಾಯಿತು.
ಈ ಸಂಧರ್ಭದಲ್ಲಿ ಗೋಪಾಲನ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ಅಧಿಕಾರಿ ಡಾ.ಭಾಸ್ಕರ ರೆಡ್ಡಿ, ಡೀನ್ ಪ್ರೊ.ಕೃಷ್ಣ ಮೂರ್ತಿ, ಡಾ.ಆನಂದಪ್ಪಾ, ಪ್ರಾಂಶುಪಾಲರಾದ, ಡಾ. ಬಸವರಾಜ, ಡಾ. ವಿಮಲಾ ಸ್ವಾಮಿ, ಡಾ.ಸಿಜಿಕೆ, ಮಹೇಶ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.